ಸರ್ಕಾರಿ ಯೋಜನೆ

ಕಾರ್ಮಿಕ ಕಾರ್ಡ ಇದ್ದವರಿಗೆ ಪ್ರತಿ ತಿಂಗಳು ₹3000 ರೂಪಾಯಿ ಅರ್ಜಿ ಪ್ರಾರಂಭ

ಕಾರ್ಮಿಕ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳು 3000 ಪಿಂಚಣಿ ಪಡೆಯಲು ಅರ್ಜಿ ಸಲ್ಲಿಸುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಈ ಸೂಚನೆಯನ್ನು ಹೊರಡಿಸಲಾಗಿದೆ. ಪ್ರತಿ ತಿಂಗಳು ಈ ಪಿಂಚಣಿಯನ್ನು ಪಡೆಯಲು ಏನು ಅರ್ಹತೆಗಳು ಇರಬೇಕು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಅರ್ಜಿ ಸಲ್ಲಿಸುವ ವಿಧಾನ ಹೇಗೆ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಲೇಬರ್ ಕಾರ್ಡ್ ಹೊಂದಿದವರಿಗೆ ಪ್ರತಿ ತಿಂಗಳು 3000ರೂ 

ರಾಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಅನುವಾಗುವಂತೆ 2007ರಲ್ಲಿ ನಿಯಮಗಳನ್ನು ರಚಿಸಿಕೊಂಡು ಹಲವಾರು ಅಭಿವೃದ್ಧಿಪರವಾದ ಯೋಜನೆಗಳನ್ನು ರೂಪಿಸಿಕೊಂಡಿದೆ.ನಿರ್ಮಾಣ ಕ್ಷೇತ್ರದ ಕಾರ್ಮಿಕರ ಹಿತದೃಷ್ಟಿಯನ್ನು ಧ್ಯೇಯವಾಗಿಸಿಕೊಂಡು ರಾಷ್ಟ್ರದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆ 1996 ಅನ್ನು ಜಾರಿಗೆ ತರಲಾಗಿದೆ. ಈ ಕಾರ್ಮಿಕ ಯೋಜನೆಗಳ ಅಡಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಿಂಗಳಿಗೆ 3000 ಗಳನ್ನು ನೇರವಾಗಿ ಖಾತೆಗೆ ಹಾಕಲಾಗುತ್ತದೆ. ಇದರ ಕುರಿತಾದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ.

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

ಪ್ರತಿ ನೋಂದಾಯಿತ ಕಟ್ಟಡ ಅಥವಾ ಇತರೆ ನಿರ್ಮಾಣ ಕಾರ್ಮಿಕ ಫಲಾನುಭವಿಯು 60 ವರ್ಷ ವಯೋಮಿತಿಯನ್ನು ಪೂರ್ಣಗೊಳಿಸಿರಬೇಕು.

ನೋಂದಾಯಿತ ಕಟ್ಟಡ ಕಾರ್ಮಿಕ 60 ವರ್ಷ ವಯಸ್ಸು ಪೂರ್ಣಗೊಳ್ಳುವ ಪೂರ್ವದಲ್ಲಿ ಕನಿಷ್ಠ 03 ವರ್ಷಗಳು ನಿರಂತರವಾಗಿ ಮಂಡಳಿಯ ಫಲಾನುಭವಿಯಾಗಿ ಮುಂದುವರೆದಿರಬೇಕು.

ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :

√ ಮಂಡಳಿಯಿಂದ ನೀಡಲಾದ ಮೂಲ ಗುರುತಿನ ಚೀಟಿ

√ ಉದ್ಯೋಗದ ದೃಢೀಕರಣ ಪತ್ರ

√ ಜೀವಿತ ಪ್ರಮಾಣ ಪತ್ರ

√ ರೇಷನ್ ಕಾರ್ಡ್ ಪ್ರತಿ

√ ಫಲಾನುಭವಿಯ ಬ್ಯಾಂಕ್ ಪಾಸ್ ಪುಸ್ತಕದ ಛಾಯಾಪ್ರತಿ

√ ಪಾಸ್ ಪೋರ್ಟ್ ಫೋಟೋ

ಅರ್ಜಿ ಸಲ್ಲಿಸುವ ವಿಧಾನ :

ಹಂತ 1: ಮೊದಲಿಗೆ, ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 2: ನಂತರ ಮುಂದಿನ ಪುಟ ತರದ ಮೇಲೆ ಕೆಳಗಿನ ಭಾಗದಲ್ಲಿ ಯೋಜನೆಗಳು ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಹಂತ 3: ನಂತರ ಪಿಂಚಣಿ ಸೌಲಭ್ಯ ಎಂಬ ಆಯ್ಕೆಯನ್ನು ಇಲ್ಲಿ ಕ್ಲಿಕ್ ಮಾಡಿ, ಅಲ್ಲಿ ನೀಡಲಾದ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ.

ಹಂತ 4: ನಂತರ, ಹೇಳಲಾದ ಅಗತ್ಯವಾದ ದಾಖಲೆಗಳನ್ನು ಲಗತ್ತಿಸಿ.

ಹಂತ 5: ಅರ್ಜಿ ಹಾಗೂ ದಾಖಲೆಗಳನ್ನು ಹತ್ತಿರದ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಬೇಕು.

ಹಂತ 6: ಸಲ್ಲಿಸಿದ ಅರ್ಜಿಯನ್ನು, ನೋಂದಣಾಧಿಕಾರಿಗಳಾದ ಹಿರಿಯ / ಕಾರ್ಮಿಕ ನಿರೀಕ್ಷಕರು ಪರಿಶೀಲನೆ ಮಾಡುತ್ತಾರೆ.

ಹಂತ 7: ನಂತರ, ಸಹಾಯಕ ಕಾರ್ಮಿಕ ಆಯುಕ್ತರಿಂದ ಅನುಮೋದನೆ ಆಗುತ್ತದೆ.

ಅರ್ಜಿ ಶುಲ್ಕ : ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.

ಮಂಡಳಿಯು ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಪಿಂಚಣಿ ಕೋರಿ ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿದ ನಂತರ, ಫಲಾನುಭವಿಗೆ ಪಿಂಚಣಿ ಮಂಜೂರಾತಿ ಆದೇಶದ ಜೊತೆಗೆ ವಿದ್ಯುನ್ಮಾನಿಕೃತ ವಿಶಿಷ್ಷ ಪಿಂಚಣಿ ಗುರುತಿನ ಚೀಟಿಯನ್ನು ನೀಡಬೇಕು.

ಫಲಾನುಭವಿಯು ಸಲ್ಲಿಸಿದ ಪಿಂಚಣಿ ಅರ್ಜಿಯ ಪರಿಶೀಲನಾ ಸಂದರ್ಭದಲ್ಲಿ ಅರ್ಜಿಯು ಅನರ್ಹ ಎಂದು ಕಂಡು ಬಂದಲ್ಲಿ, ಅರ್ಜಿಯನ್ನು ತಿರಸ್ಕರಿಸಲಾಗುವುದು. ಪಿಂಚಣಿದಾರ ಮರಣ ಹೊಂದಿದಾಗ, ಅವರ ಕಾನೂನುಬದ್ದ ಅವಲಂಬಿತರು ಅಥವಾ ಉತ್ತರಾಧಿಕಾರಿಗಳು ಪಿಂಚಣಿದಾರರ ಮರಣ ಪ್ರಮಾಣ ಪತ್ರವನ್ನು ಸಲ್ಲಿಸಿ ಬ್ಯಾಂಕ್ ಖಾತೆಯನ್ನು ಮುಚ್ಚಲು ಮಂಡಳಿಗೆ ತಿಳಿಸಬೇಕು

ಪಿಂಚಣಿಯ ಮೊತ್ತವು ಮಾಸಿಕ ರೂ 3000/-ಗಳನ್ನು (ಸರ್ಕಾರದ ಅಧಿಸೂಚನೆ ಸಂಖ್ಯೆ ಎಲ್ ಡಿ 458 ಎಲ್ ಇಟಿ 2021 ಬೆಂಗಳೂರು ದಿನಾಂಕ: 08-08-2022 ರಂತೆ ) ಮೀರತಕ್ಕದಲ್ಲ, ಮತ್ತು ಫಲಾನುಭವಿಯು ಸರ್ಕಾರದ ಇತರೆ ಯೋಜನೆಯಡಿ ಇದೇ ತರಹದ ಯಾವುದೇ ಸೌಲಭ್ಯವನ್ನು ಪಡೆದಿರಬಾರದು)

ನೋಂದಾಯಿತ ಫಲಾನುಭವಿಯು ಪಿಂಚಣಿಯನ್ನು ಮುಂದುವರೆಸಲು ಪ್ರತಿ ವರ್ಷವೂ ಜೀವಿತ ಪ್ರಮಾಣ ಪತ್ರ ನಮೂನೆ XIV –A (living certificate form XIV –A) ಅನ್ನು ಮಂಡಳಿಯ ತಂತ್ರಾಂಶದಲ್ಲಿ ಮಂಜೂರಾತಿ ಅಧಿಕಾರಿಗೆ ಸಲ್ಲಿಸಬೇಕು.

ಲೇಬರ್ ಕಾರ್ಡ್ ಹೊಂದಿದವರು, ತಿಂಗಳಿಗೆ 3000 ರೂಗಳನ್ನು ಪಡೆಯಲು, ಈ ಮೇಲಿನ ವಿವರಗಳನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

LEAVE A RESPONSE

Your email address will not be published. Required fields are marked *