Government Scheme govt. scheme.

ತೋಟಗಾರಿಕೆ ಇಲಾಖೆ ವತಿಯಿಂದ ಕೃಷಿ ಯಂತ್ರೋಪಕರಣಗಳ ಖರೀದಿಗೆ 50% ಸಬ್ಸಿಡಿ ಅರ್ಜಿ ಆಹ್ವಾನ.

ತೋಟಗಾರಿಕೆ ಇಲಾಖೆ ವತಿಯಿಂದ ಕೃಷಿ ಯಂತ್ರೋಪಕರಣಗಳ ಖರೀದಿಗೆ 50% ಸಬ್ಸಿಡಿ ಅರ್ಜಿ ಆಹ್ವಾನ.

 

ಎಷ್ಟು ರೂಪಾಯಿ ವರೆಗೆ ಸಬ್ಸಿಡಿ ನೀಡುತ್ತಾರೆ ಎಂದು ತಿಳಿಯೋಣ. 
 ಸರ್ಕಾರವು ರೈತರ ಹಿತದೃಷ್ಟಿಯಿಂದ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ರೈತರಿಗೆ ಕೃಷಿಯಲ್ಲಿ ಆದಾಯ ಹೆಚ್ಚಿಸಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಕೆಲಸ ನಿರ್ವಹಣೆ ಮಾಡುತ್ತಿದೆ. ಹಾಗೂ ಸದ್ಯದಲ್ಲಿ ತೋಟಗಾರಿಕೆ ಇಲಾಖೆಯ 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ತಂತ್ರಜ್ಞಾನ ಅಭಿಯಾನ ಯೋಜನೆ , ಕೃಷಿ ಯಾಂತ್ರೀಕರಣ ಉಪ ಅಭಿಯಾನದಡಿ ಕೃಷಿ ಯಂತ್ರೋಪಕರಣ ಖರೀದಿಸುವ ತೋಟಗಾರಿಕೆ ಬೆಳೆ ರೈತರಿಗೆ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ .
ಮುಖ್ಯವಾಗಿ ಹೇಳಬೇಕೆಂದರೆ ತೋಟಗಾರಿಕೆ ಇಲಾಖೆ ನಿಯಮಾನುಸಾರ ಸಬ್ಸಿಡಿ ನೀಡಲಿದ್ದು, ಇದರಲ್ಲಿ ರೈತರು ಖರೀದಿಸುವ ಕೃಷಿ ಯಂತ್ರೋಪಕರಣಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತೀ ಸಣ್ಣ ಹಾಗೂ ಮಹಿಳಾ ಫಲಾನುಭವಿಗಳಿಗೆ ಶೇ. 50 ರ ಸಹಾಯಧನ ಹಾಗೂ ಇತರೆ ವರ್ಗದ ಫಲಾನುಭವಿಗಳಿಗೆ ಶೇ.40 ರಷ್ಟು ಸಹಾಯಧನ ಲಭ್ಯವಿರುತ್ತದೆ. ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ವಿವಿಧ ಘಟಕಗಳಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಸಹಾಯಧನ ಸೌಲಭ್ಯ ನೀಡಲಾಗುವುದು.
ಯಾವ ಯಾವ ವಸ್ತುಗಳಿಗೆ ಸಬ್ಸಿಡಿ ನೀಡುತ್ತಾರೆ? ಯಾವ ಚಟುವಟಿಕೆಗಳಿಗೆ ನೀಡುತ್ತಾರೆ?
ಮುಖ್ಯವಾಗಿ ಹೇಳಬೇಕೆಂದರೆ ಇದರಲ್ಲಿ ಕೃಷಿ ಚಟುವಟಿಕೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಂದರೆ ಮೋಹಕ ಕೀಟ ಬಲೆ, ಜಿಗುಟಾದ ಬಲೆಗಳು, ನೀರಿನಲ್ಲಿ ಕರಗುವ ರಸಗೊಬ್ಬರ, ಕೊಯ್ಲೋತ್ತರ ನಂತರದ ಚಟುವಟಿಕೆಗಳಿಗೆ ಬಳಸುವ ಪ್ಲಾಸ್ಟಿಕ್ ಕ್ರೇಟ್ಸ್, ಪುನೇಟ್ ಬಾಕ್ಸ್, ಕೊರುಗೇಟೆಡ್ ಬಾಕ್ಸ್‍ಗಳನ್ನು ಅನುಮೋದಿತ ಸಂಸ್ಥೆಯವರಿಂದ ಖರೀದಿಗೆ ಸಹಾಯಧನದ ಸೌಲಭ್ಯವಿರುತ್ತದೆ. ಹಣ್ಣಿನ ಗಿಡಗಳ ಮೇಲಾವರಣ ನಿರ್ವಹಣೆ ಮತ್ತು ಕ್ಷೇತ್ರ ಮಟ್ಟದಲ್ಲಿ ವಿಂಗಡಣೆ, ಪ್ಯಾಕಿಂಗ್ ಮತ್ತು ಸಂಗ್ರಹಣಾ ಘಟಕಗಳ ನಿರ್ಮಾಣಕ್ಕೆ ಸಹಾಯಧನದ ಸೌಲಭ್ಯವಿರುತ್ತದೆ.
  ಯಾವ ಯೋಜನೆ ಅಡಿಯಲ್ಲಿ ದೊರೆಯುತ್ತದೆ? ಎಲ್ಲಿ ಅರ್ಜಿ ಸಲ್ಲಿಸಬೇಕು?
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೋಟಗಾರಿಕೆ ಇಲಾಖೆ ವತಿಯಿಂದ ಹಲವಾರು ಯೋಜನೆಗಳನ್ನು ರೂಪಿಸಿದ್ದು ಇದರಲ್ಲಿ ಮುಖ್ಯವಾಗಿ ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ತಂತ್ರಜ್ಞಾನ ಅಭಿಯಾನ ಯೋಜನೆ ಮತ್ತು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಆಸಕ್ತ ರೈತರು ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಸಂಪರ್ಕಿಸಬೇಕೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A RESPONSE

Your email address will not be published. Required fields are marked *