governament Government Scheme scheme.

ಪ್ರತಿಭಾ ಪುರಸ್ಕಾರ ಹಾಗೂ ಸೇನೆ ನೇಮಕಾತಿಗಾಗಿ ತರಬೇತಿಗೆ ಆನ್‍ಲೈನ್ ಅರ್ಜಿ ಆಹ್ವಾನ.

ಪ್ರತಿಭಾ ಪುರಸ್ಕಾರ ಹಾಗೂ ಸೇನೆ ನೇಮಕಾತಿಗಾಗಿ ತರಬೇತಿಗೆ ಆನ್‍ಲೈನ್ ಅರ್ಜಿ ಆಹ್ವಾನ.

 

2022 ನೇ ವರ್ಷದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದು, ಶೇ. 70 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಇಲಾಖೆಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 

ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಅರ್ಜಿ ಸಲ್ಲಿಸಲು ಫೆ.9 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್

 

Official website

Click here

 

 

 

 

 

 ಸಹಾಯವಾಣಿ 8050770004 ಬೆಳಗ್ಗೆ 10 ರಿಂದ ಸಂಜೆ 5-30 ಗಂಟೆವರೆಗೆ ಸಂಪರ್ಕಿಸಬಹುದು.

 

ಸೇನೆ ನೇಮಕಾತಿಗೆ ತರಬೇತಿಗಾಗಿ ಅರ್ಜಿ ಆಹ್ವಾನ :

ಭಾರತೀಯ ಸೇನೆ, ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

 

ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 805077000 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A RESPONSE

Your email address will not be published. Required fields are marked *