ಸರ್ಕಾರಿ ಯೋಜನೆ

ಉಚಿತ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ ಮನೆ ಕಟ್ಟಿಸಿಕೊಳ್ಳಿ

2022-23ನೇ ಸಾಲಿಗೆ ಹೊಸದಾಗಿ ನಿಗದಿಪಡಿಸಿದ ಗುರಿಯಂತೆ ಅಲೆಮಾರಿ ಅರೆ ಅಲೆಮಾರಿ ಜನಾಂಗದರಿಗೆ ವಸತಿ ಸೌಲಭ್ಯಕ್ಕಾಗಿ ಅಲೆ ಮಾರಿ ಅರೆ ಅಲೆಮಾರಿ ಜನಾಂಗದ ವಸತಿ ರಹಿತ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ನಿಗದಿಪಡಿಸಿದ ಗುರಿಗನುಗುಣವಾಗಿ 115 ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಕಲಬುರಗಿ ಜಿಲ್ಲೆಯ ಅರ್ಹ ಫಲಾನುಭವಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಸಲ್ಲಿಸಬೇಕು.

ಆಧಾರ್ ಕಾರ್ಡ್ , ರೇಶನ್ ಕಾರ್ಡ್, ಸ್ವಂತ ನಿವೇಶನ ಹೊಂದಿರುವ ದಾಖಲಾತಿ ಪ್ರತಿ, ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಇದರೊಂದಿಗೆ ವಾಸಸ್ಥಳ ಪ್ರಮಾಣ ಪತ್ರ ಸಲ್ಲಿಸಬೇಕು. ಬ್ಯಾಂಕ್ ಖಾತೆಯ ಪ್ರತಿ ಇರಬೇಕು. ನಿವೇಶನದ ಖಾತಾ ಪ್ರತಿ ಇರಬೇಕು. ಹಾಗೂ ಇತ್ತೀಚಿನ ಎರಡು ಭಾವಚಿತ್ರದೊಂದಿಗೆ 2022-23 ರ ಮಾರ್ಚ್ 11 ರೊಳಗಾಗಿ ಸಂಬಂಧಪಟ್ಟ ಆಯಾ ತಾಲೂಕುಗಳ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.

ಕೊಡಗು ಜಿಲ್ಲೆಯಿಂದಲೂ ಅಲೆಮಾರಿ, ಅರೆ ಅಲೆಮಾರಿ ಜನಾಂಗಕ್ಕೆ ವಸತಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿರುವ ಪ್ರವರ್ಗ 1 ಕ್ಕೆ ಸೇರಿದ ಅಲೆಮಾರಿ ಅರೆ ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ಕಲ್ಲಿಸಲು ಆರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಮಡಿಕೇರಿ ದೂರವಾಣಿ ಸಂಖ್ಯೆ 08272 295628, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ ಮೊಬೈಲ್ ಸಂಖ್ಯೆ8762476790 ಗೆ ಕರೆ ಮಾಡಬಹುದು.

LEAVE A RESPONSE

Your email address will not be published. Required fields are marked *