governament Government Scheme scheme.

ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ ಫೆ,20ರ ಒಳಗೆ ಅರ್ಜಿ ಸಲ್ಲಿಸಿ?

ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ ಫೆ,20ರ ಒಳಗೆ ಅರ್ಜಿ ಸಲ್ಲಿಸಿ? ಯಾರೆಲ್ಲ ಅರ್ಹರು ಇಲ್ಲಿದೆ ಸಂಪೂರ್ಣ ಮಾಹಿತಿ.

 

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಮಹಿಳೆಯರಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಹೊಲಿಗೆ ಯಂತ್ರ ವಿತರಣೆ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

 

ಸೇವಾ ಸಿಂಧೂ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬೇಕು.

 

ಹೊಲಿಗೆ ಯಂತ್ರ ವಿತರಣೆ ಯೋಜನೆ:-

ಈ ಯೋಜನೆಯಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿರುವ ಜನರಿಗೆ ಆರ್ಥಿಕ ಚೈತನ್ಯಕ್ಕಾಗಿ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ನೀಡಲಾಗುವುದು. ಸೌಲಭ್ಯ ಪಡೆಯಲು ಇಚ್ಚಿಸುವವರು ಅರ್ಜಿಗಳನ್ನು ಸೇವಾ ಸಿಂಧೂ ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ 20/02/2023 ಸಂಜೆ 5.00 ಗಂಟೆಯೊಳಗೆ ಸಲ್ಲಿಸುವುದು.

 

 

ಸಾಮಾನ್ಯ ಅರ್ಹತೆಗಳು:

 

1.ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವರು ಸರ್ಕಾರದ ಆದೇಶದನ್ವಯ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.

2.ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.

3.  ನಿಗಮದ ಯೋಜನೆಗಳಡಿ ಸೌಲಭ್ಯ ಪಡೆಯಲು ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ 98,000/-ರೂಗಳು ಮತ್ತು ನಗರ ಪ್ರದೇಶದವರಿಗೆ ರೂ. 1,20,000/- ರೂಗಳ ಒಳಗಿರಬೇಕು.

4.  ಆಧಾರ್ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳು), ಜಾತಿ ಮತ್ತು ಆದಾಯ ಪ್ರಮಾಣ ಪತದಲ್ಲಿಯೂ ಇದ್ದು ಹೊಂದಾಣಿಕೆಯಗಬೇಕು.

5.  ಹೊಲಿಗೆ ಯಂತ್ರ ತರಬೇತಿ ಹೊಂದಿದ ಪ್ರಮಾಣ ಪತ್ರ ಹೊಂದಿರಬೇಕು.

6.  ಒಂದು ಕುಟುಂಬದಲ್ಲಿ ಓರ್ವ ಸದಸ್ಯರು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

7..ಸೌಲಭ್ಯ ಪಡೆಯಲು ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯನ್ನ ಸಂಪರ್ಕಿಸಬಹುದು ಸೇವಾಸಿಂಧೂ ಪೋರ್ಟಲ್ ಮುಖಾಂತರ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್_ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸುವುದು, ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ 08262-295815 ಗೆ ಕರೆ ಮಾಹಿತಿಯನ್ನು ಪಡೆಯಬಹುದು ಎಂದು ನಿಗಮದಿಂದ ಪ್ರಕಟಣೆ ಹೊರಡಿಸಲಾಗಿದೆ.

LEAVE A RESPONSE

Your email address will not be published. Required fields are marked *