15 ಲಕ್ಷ Government Scheme ಉನ್ನತ ವ್ಯಾಸಂಗ ಬಡ್ಡಿ ರಹಿತ ಸಾಲ ಯೋಜನಾ

ಉನ್ನತ ವ್ಯಾಸಂಗಕ್ಕೆ 15 ಲಕ್ಷ ರೂಪಾಯಿಯವರೆಗೆ ಬಡ್ಡಿರಹಿತ ಸಾಲ ನೀಡಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉನ್ನತ ವ್ಯಾಸಂಗ(Higher Education) ಮಾಡಲಿಚ್ಚಿಸುವ ವಿದ್ಯಾರ್ಥಿ(Student)ಗಳಿಗೆ ಪ್ರತಿ ವರ್ಷ 5 ಲಕ್ಷ (Five lack) ರೂಪಾಯಿಯಂತೆ ಮೂರು ವರ್ಷಕ್ಕೆ 15 ಲಕ್ಷ ರೂಪಾಯಿ ಬಡ್ಡಿರಹಿತ ಸಾಲ ಸಿಗಲಿದೆ.

ಹೌದು,  ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಎಂಜಿನಿಯರಿಂಗ್(Engineering) ಮತ್ತು ಟೆಕ್ನಾಲಜಿ, ಮ್ಯಾನೇಜಮೆಂಟ್(Technology Management) ಮತ್ತು ಕಾರ್ಮಸ್(Commerce), ಸೈನ್ಸ್(Science) ಮತ್ತು ಟೆಕ್ನಾಲಜಿ(Technology), ಅಗ್ರಿಕಲ್ಚರ್(Agriculture) ಮತ್ತು ಅಲೈಡ್ ಸೈನ್ಸ್ ಟೆಕ್ನಾಲಜಿ, ಮೆಡಿಸಿನ್(Medicine) ಮತ್ತು ಹ್ಯುಮ್ಯಾನಿಟೀಸ್ ಮತ್ತು  ಸೋಶಿಯಲ್ ಸೈನ್ (Social Science) ಈ ಆರು ಕೋರ್ಸ್ ಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಲಾಗುವುದು.

ಮೇಲೆ ತಿಳಿಸಿದ ಕೋರ್ಸ್(Course) ಗಳಲ್ಲಿ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಾರ್ಷಿಕ ಗರಿಷ್ಠ ರೂಪಾಯಿ 5 ಲಕ್ಷ ರೂಪಾಯಿಗಳಂತೆ ಮೂರು ವರ್ಷಗಳ ಅವಧಿಗೆ ರೂಪಾಯಿ 15 ಲಕ್ಷ ಸಾಲವನ್ನು ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ (ಹೊಸತು) ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಯೋಜನೆಗಳಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು)

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆ ಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ)

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ವಿದ್ಯಾರ್ಥಿಗಳು ಈಗಾಲೇ ಈ ನಿಗಮಗಳ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆದಿರುವ ವಿದ್ಯಾರ್ಥಿಗಳು ಉಳಿದ ಮೂರು ಮತ್ತು ನಾಲ್ಕು ಕಂತುಗಳ ಸಾಲ ಬಿಡುಗಡೆಗಾಗಿ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಹುದು.

ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ವಿದ್ಯಾರ್ಥಿಗಳು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್ಲೈನ್ ಮುಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080 22374837 ಮತ್ತು 9606066389 ಅಥವಾ 8824300400 ಗೆ ಸಂಪರ್ಕಿಸಬಹುದು.

LEAVE A RESPONSE

Your email address will not be published. Required fields are marked *