General information ಅರ್ಜಿ ಕಾಫಿ ಸಬ್ಸಿಡಿ

ಕಾಫಿ ಬೆಳೆಗಾರರಿಗೆ ಶೇ. 40 ರಿಂದ 50 ರವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

ಕಾಫಿ ಬೆಳೆಗಾರರಿಗೆ ಸಿಹಿ ಸುದ್ದಿ. ಕಾಫಿ ಬೆಳೆಗಾರರಿಗೆ ಶೇ. 40 ರಿಂದ 50 ರವರೆಗೆ ಸಹಾಯಧನ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಹೌದು, ಕೊಡಗು ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

25 ಎಕರೆ ಒಳಗಿನ ಎಲ್ಲಾ ಸಣ್ಣ ಕಾಫಿ ಬೆಳೆಗಾರರು ಅರ್ಜಿ ಸಲ್ಲಿಸಿ ಇದರ ಪ್ರಯೋಜನ ಪಡದುಕೊಳ್ಳಲು ಕೋರಲಾಗಿದೆ ಎಂದು ಗೋಣಿಕೊಪ್ಪ ಕಾಫಿ ಮಂಡಳಿಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

25 ವರ್ಷ ಮೀರಿದ ಕುಬ್ಜ ಅರೇಬಿಕಾ ತಳಿಗಳು ಹಾಗೂ 40 ವರ್ಷ ಮೀರಿದ ರೊಬಸ್ಟಾ ಅನುತ್ಪಾದಕ ತೋಟಗಳಲ್ಲಿ, ಗಿಡಗಳನ್ನು ತೆಗೆದು ಹೊಸ ಗಿಡಗಳನ್ನುಹಾಕಲು (ಮರುನಾಟಿ), ಕೆರೆ, ನೀರಾವರಿ ವ್ಯವಸ್ಥೆ ಕಲ್ಪಿಸಲು ಸಹಾಯದನ ನೀಡಲಾಗುವುದು.

25 ಎಕರೆ ಒಳಗಿನ ವೈಯಕ್ತಿಕ ಸಣ್ಣ ಬೆಳೆಗಾರರಿಗೆ ಮಾತ್ರ ಅನ್ವಯವಾಗುತ್ತದೆ. ರಿಪ್ಲಾಂಟೇಶನ್ ಹಾಗೂ ಯಾಂತ್ರೀಕರಣ ಹೊರತುಪಡಿಸಿ, ಕಳೆದ ಹತ್ತು ವರ್ಷಗಳಲ್ಲಿ 2012-13 ರಿಂದ ಕಾಫಿ ಮಂಡಳಿಯಿಂದ ಯಾವುದೇ ಸಹಾಯಧನ ಪಡೆದಿರಬಾರದು.

ಸಾಮಾನ್ಯ ವರ್ಗದ ಬೆಳೆಗಾರರಿಗೆ ಸಹಾಯಧನ ಶೇ. 40 ರಷ್ಟು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬೆಳೆಗಾರರಿಗೆ ಶೇ. 50 ರಷ್ಟುಸಹಾಯಧನ ನೀಡಲಾಗುವುದು.

ಕಾಫಿ ಮಂಡಳಿಯ ಕಚೇರಿಯಲ್ಲಿ ಅರ್ಜಿಗಳು ದೊರೆಯುತ್ತವೆ.ಫೆಬ್ರವರಿ 15 ರೊಳಗಾಗಿ ಅರ್ಜಿಗಳನ್ನು ಪಡೆದು ಸಲ್ಲಿಸಬೇಕು. ಅರ್ಜಿಗಳನ್ನು ಆನ್ಲೈನ್ ಮೂಲಕವೂ ಪಡೆಯಬಹುದು.

www.indiacoffee.org ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾಫಿ ಮಂಡಳಿಯ ಕಚೇರಿಯನ್ನು ಸಂಪರ್ಕಿಸಲು ಗೋಣಿಕೊಪ್ಪ ಕಾಫಿ ಮಂಡಳಿಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯ ಆರ್ಥಿಕತೆಯಲ್ಲಿ ಕಾಫಿ ಬೆಳೆಯ ಪ್ರಾಮುಖ್ಯತೆಯನ್ನು ಮನಗಂಡು ಭಾರತ ಸರ್ಕಾರವು ಒಂದು ಜಿಲ್ಲೆ ಒಂದು ಬೆಳೆ ಯೋಜನೆಯಲ್ಲಿ ಕೊಡಗು ಜಿಲ್ಲೆಗೆ ಕಾಫಿ ಬೆಳೆಯನ್ನು ಆಯ್ಕೆ ಮಾಡಿದೆ. ಈ ಯೋಜನೆಯಡಿಯಲ್ಲಿ ಉತ್ಸಾಹಿ ಯುವಕರು , ಉದ್ಯಮಿಗಳು ಕಿರು ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಶೇ. 50 ರಷ್ಟು ಸಹಾಯದನ ನೀಡಲಾಗುವುದು. ಈ ಯೋಜನೆಯನ್ನು ಕರ್ನಾಟಕ ರಾಜ್ಯದಲ್ಲಿ ಕೃಷಿ ಇಲಾಖೆಯ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದೆ.

ದೇಶದಲ್ಲಿ ಆಂತರಿಕ ಮಾರುಕಟ್ಟೆಯನ್ನು ವಿಸ್ತರಿಸಲು ಮಂಡಳಿಯು ಕಾಫಿ ಪುಡಿ ಘಟಕಗಳನ್ನು ಸ್ಥಾಪಿಸಲು ಬಯಸುವ ಉತ್ಸಾಹಿ ಉದ್ಯಮಿಗಳನ್ನು ಪ್ರೋತ್ಸಾಹಿಸುತ್ತದೆ, ಎಸ್.ಟಿ ಫಲಾನುಭವಿಗಳನ್ನು ಬೆಂಬಲಿಸಲು ವಿಶೇಷ ಯೋಜನೆಗಳನ್ನು ಸಹ ಜಾರಿಗೊಳಿಸಲಾಗಿದೆ.

ಕಾಫಿ ಬೆಳೆಯ ಕುರಿತಂತೆ ಹಾಗೂ ಅಧಿಕಾರಿಗಳ ಮಾಹಿತಿ

ರೈತರು ಕಾಫಿ ಬೆಳೆಯ ಕುರಿತಂತೆ ಹಾಗೂ ಅಧಿಕಾರಿಗಳನ್ನು ಸಂಪರ್ಕಿಸಲು ಈ ಅಧಿಕೃತ ಅಂತರ್ಜಾಲ

ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕಾಫಿ ಮಂಡಳಿ ಮಂಜೇ ತೆರೆದುಕೊಳ್ಳುತ್ತದೆ. ಇಲ್ಲಿ ರೈತರು ನಿಮಗೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.

 

LEAVE A RESPONSE

Your email address will not be published. Required fields are marked *