governament Government Scheme scheme.

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ ಸಿಗಲಿದೆ ರೂ.20 ಸಾವಿರ ಸಹಾಯ ಧನ –

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ ಸಿಗಲಿದೆ ರೂ.20 ಸಾವಿರ ಸಹಾಯ ಧನ – 

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2022-23ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿವರೆಗೆ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾರ್ಥಿಗಳು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್‌ಸೈಟ್‌ 

Click here

ಗ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹಿಂದುಳಿದ ವರ್ಗಗಳ ಇಲಾಖೆ ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಜ.31 ಕೊನೆಯ ದಿನಾಂಕ ಅರ್ಜಿ ಸಲ್ಲಸಲು ಪಾಲಿಸಬೇಕಾದ ಸೂಚನೆಗಳು ಮತ್ತು ಬೇಕಾದ ದಾಖಲೆಗಳು

ಅರ್ಜಿ ಸಲ್ಲಸಲು ಪಾಲಿಸಬೇಕಾದ ಸೂಚನೆಗಳು ಮತ್ತು ಬೇಕಾದ ದಾಖಲೆಗಳು

 

•  ಒಂದು ಕುಟುಂಬದಿಂದ ಒಬ್ಬ ವಿದ್ಯಾರ್ಥಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದರೆ ತಿರಸ್ಕರಿಸಲಾಗುವುದು.

•  ಬ್ಯಾಂಕ್‌ ಪಾಸ್‌ಬುಕ್ ಪ್ರತಿ ಲಗತ್ತಿಸುವಾಗ ಅಕೌಂಟ್ ನಂಬರ್ ಮತ್ತು ಐಎಫ್‌ಎಸ್‌ಸಿ ಕೋಡ್ ಸ್ಪಷ್ಟವಾಗಿ ಕಾಣುವಂತಿರಬೇಕು.

•  ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂಕಪಟ್ಟಿ ವಿವರಗಳು ಸ್ಪಷ್ಟವಾಗಿ ಕಾಣುವಂತಿರಬೇಕು.

•  ಪದವಿ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್, ಮೆಡಿಕಲ್ ವಿದ್ಯಾರ್ಥಿಗಳು ಅಂಕಪಟ್ಟಿ ವಿವರಗಳು ಸ್ಪಷ್ಟವಾಗಿ ಕಾಣುವಂತಿರಬೇಕು.ಮತ್ತು ಹಿಂದಿನ ಎರಡು ಸೆಮಿಸ್ಟರ್ ಗಳ ಅಂಕಪಟ್ಟಿಯನ್ನು ಕಡ್ಡಾಯವಾಗಿ ಅಪ್‌ಲೋಡ್‌ ಮಾಡಬೇಕು.

•  ವಿದ್ಯಾರ್ಥಿ, ತಂದೆ, ತಾಯಿಯ ಆಧಾರ್ ಕಾರ್ಡ್ ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು.

•  ತಂದೆ ಅಥವಾ ತಾಯಿ ಮರಣ ಹೊಂದಿದ್ದಲ್ಲಿ ಅವರ ಮರಣ ಪ್ರಮಾಣ ಪತ್ರ ಲಗತ್ತಿಸಬೇಕು.

 

ಈ ಮೇಲಿನ ದಾಖಲೆಗಳನ್ನು ಸರಿಯಾಗಿ ಅಪ್‌ಲೋಡ್‌ ಮಾಡದಿದ್ದರೆ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು

 

ಅರ್ಜಿ ಸಲ್ಲಿಸಲು ಇರುವ ಷರತ್ತುಗಳು

 

•  ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿವರೆಗೆ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

•  ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಶೇಕಡ.50 ರಷ್ಟು ಅಂಕ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಶೇಕಡ. 45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು.

•  ಕಾರ್ಮಿಕರ ಮಾಸಿಕ ವೇತನ ರೂ. 35,000/- ಮೀರಿರಬಾರದು.

•ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳಿಗೆ ಸಿಗುವ ಪ್ರೋತ್ಸಾಹಧನದ ವಿವರ

8 ರಿಂದ 10ನೇ ತರಗತಿ ವರೆಗೆ – ರೂ.6000 /-

ಪಿಯುಸಿ, ಡಿಪ್ಲೊಮ, ಐಟಿಐ,ಟಿಸಿಹೆಚ್ ಇತ್ಯಾದಿ – ರೂ.8000/-.

ಪದವಿ ವಿದ್ಯಾರ್ಥಿಗಳಿಗೆ – ರೂ.10,000/-.

ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ – ರೂ.12,000/-

ಇಂಜಿನಿಯರಿಂಗ್/ ಮೆಡಿಕಲ್ ವಿದ್ಯಾರ್ಥಿಗಳಿಗೆ – ರೂ.20,000/-.

ಈ ಹಿಂದೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31,2022 ರವರೆಗೆ ಅವಕಾಶ ನೀಡಲಾಗಿತ್ತು.

ಈಗ ಈ ದಿನಾಂಕವನ್ನು ವಿಸ್ತರಿಸಲಾಗಿದ್ದು ಅರ್ಜಿ ಸಲ್ಲಿಸಲು ಫೆಬ್ರವರಿ 28,2023 ರವರೆಗೆ ಅವಕಾಶ ನೀಡಲಾಗಿದೆ.

LEAVE A RESPONSE

Your email address will not be published. Required fields are marked *