Government Scheme ನೋಂದಣಿ ಪತಿ ಪತ್ನಿ ಪಿಎಂ ಕಿಸಾನ್ ಯೋಜನಾ

ಪಿಎಂ ಕಿಸಾನ್ ಯೋಜನೆಗೆ ಪತಿ, ಪತ್ನಿ, ಮಕ್ಕಳೂ ನೋಂದಣಿ ಮಾಡಿಸುವುದು ಹೇಗೆ?

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಒಂದು ಕುಟುಂಬದ ಪತಿ, ಪತ್ನಿ ಹಾಗೂ ವಯಸ್ಕ ಮಕ್ಕಳೂ ನೋಂದಣಿ ಮಾಡಿಸಬಹುದು. ಹೌದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi Scheme) ಯೋಜನೆಯಡಿ ಕೇಂದ್ರ-ರಾಜ್ಯ ಸರ್ಕಾರದಿಂದ ಆರ್ಥಿಕ ಪ್ರೋತ್ಸಾಹಧನ(Economic Prize Money) ಪಡೆಯಲು ಯೋಜನೆಯಡಿ ಹೊಸದಾಗಿ ನೋಂದಣಿಗೆ ಅವಕಾಶ ಕಲ್ಲಿಸಲಾಗಿದೆ ಎಂದು ಕಲಬುರಗಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಸಮದ ಪಟೇಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಎಂ ಕಿಸಾನ್ ಯೋಜನೆಯಡಿ ನೋಂದಣಿಯಾಗದ ಜಂಟಿ ಖಾತೆದಾರರು 1-2-2019 ರ ನಂತರ ಪೌತಿ ವರ್ಗಾವಣೆ ಕಾರಣಗಳಿಂದಾಗಿ ಖಾತೆ ವರ್ಗಾವಣೆಯಾಗದೆ ಇರುವ ಫಲಾನುಭವಿಗಳು ಹಾಗೂ ಒಂದೇ ಕುಟುಂಬದ ಅಂದರೆ ಗಂಡ-ಹೆಂಡತಿ ಹಾಗೂ ಭೂ ಹಿಡುವಳಿ ಹೊಂದಿರುವ ವಯಸ್ಕ ಮಕ್ಕಳೂ ಈ ಯೋಜನೆಯಡಿ ಹೊಸದಾಗಿ ನೋಂದಾಯಿಸಿಕೊಳ್ಳಬಹುದು.

ಬೇಕಾಗುವ ದಾಖಲಾತಿಗಳು

  • ಆಧಾರ್ ಕಾರ್ಡ್
  • ಜಮೀನಿನ ಪಹಣಿ
  • ಬ್ಯಾಂಕ್ ಪಾಸ್ ಬುಕ್
  • ಇತ್ತೀಚಿನ ಭಾವಚಿತ್ರ

ಕಲಬುರಗಿ ಜಿಲ್ಲೆಯಲ್ಲಿ ಈವರೆಗೆ 2,88,027 ರೈತ ಹಿಡುವಳಿದಾರರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿಸಿಕೊಂಡು ಆರ್ಥಿಕ ಸಹಾಯಧನ ಲಾಭ ಪಡೆಯುತ್ತಿದ್ದಾರೆ ಎಂದು ಸಮದ ಪಟೇಲ್ ತಿಳಿಸಿದ್ದಾರೆ.

ರೈತರು ಮೊಬೈಲ್ ನಲ್ಲೇ ನೋಂದಣಿ ಮಾಡಿಸಲು ಇಲ್ಲಿ ಕ್ಲಿಕ್ ಮಾಡಿ

ರೈತರು ಪಿಎಂ ಕಿಸಾನ್ ಯೋಜನೆಗೆ ತಮ್ಮ ಮೊಬೈಲ್ ನಲ್ಲೇ ನೋಂದಣಿ ಮಾಡಿಸಿಕೊಳ್ಳಬಹುದು. ನೋಂದಣಿ ಮಾಡಿಸಲು ಈ

https://pmkisan.gov.in/RegistrationFormNew.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ New Farmer Registration Form ಓಪನ್ ಆಗುತ್ತದೆ. ಅಲ್ಲಿ ರೈತರು ಗ್ರಾಮೀಣ ಪ್ರದೇಶದವರೋ ಅಥವಾ ನಗರ ಪ್ರದೇಶದವರೋ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ಆಧಾರ್ ನಂಬರ್ ನಮೂದಿಸಬೇಕು. ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ನಿಮ್ಮ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ Get OTP ಮೇಲೆ ಕ್ಲಿಕ್ ಮಾಡಬೇಕು.ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಅಲ್ಲಿ ಕೇಳಲಾದ ಅಗತ್ಯಮಾಹಿತಿಗಳನ್ನು ಭರ್ತಿ ಮಾಡಿ ನೋಂದಣಿ ಮಾಡಿಸಬೇಕು.

ಒಂದು ವೇಳೆ ನಿಮಗೆ ಮೊಬೈಲ್ ನಲ್ಲಿ ನೋಂದಣಿ ಮಾಡಿಸಲು ಸಮಸ್ಯೆಯಾಗುತ್ತಿದ್ದರು ನೀವು ನಿಮ್ಮ ಹತ್ತಿರದ ಸಿ.ಎಸ್.ಸಿ ಕೇಂದ್ರದಲ್ಲಿ ನೋಂದಣಿ ಮಾಡಿಸಬಹುದು. ಗ್ರಾಮ ಒನ್ ಕೇಂದ್ರಗಳಲ್ಲಿಯೂ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಬಹುದು.

ಪಿಎಂ ಕಿಸಾನ್ ಹಣ ಯಾವಾಗ ಜಮೆಯಾಗಬಹುದು?

ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ಇದೇ ಜನವರಿ ತಿಂಗಳಲ್ಲಿ ಜಮೆಯಾಗಬಹುದು. ಸಂಕ್ರಾಂತಿ ಹಬ್ಬಕ್ಕಿಂತ ಮೊದಲು ರೈತರ ಖಾತೆಗೆ ಜಮೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇಕೆವೈಸಿ ಮಾಡಿಸಿದ ರೈತರಿಗೆ ಮಾತ್ರ 13ನೇ ಕಂತಿನ ಹಣ ಜಮೆಯಾಗಲಿದೆ.

ಇಕೆವೈಸಿ ಮೊಬೈಲ್ ನಲ್ಲಿ ಚೆಕ್ ಮಾಡಿ

ರೈತರು ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನ ಮೊಬೈಲಿನಲ್ಲಿ ಚೆಕ್ ಮಾಡಲು ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಟಿಪಿ ಬೇಸಡ್ ಇಕೆವೈಸಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಆಧಾರ್ ಕಾರ್ಡ್ ನಮೂದಿಸಿ  Search ಮೇಲೆ ಕ್ಲಿಕ್ ಮಾಡಬೇಕು. ಆಗ ಇಕೆವೈಸಿ ಆಗಿದೆಯೋ ಇಲ್ಲವೋ ಗೊತ್ತಾಗುತ್ತದೆ.

LEAVE A RESPONSE

Your email address will not be published. Required fields are marked *