ಸರ್ಕಾರಿ ಯೋಜನೆ

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಇಂದು ಸರ್ಕಾರದಿಂದ ಖಾತೆಗೆ ಬರಲಿದೆ ವಿದ್ಯಾನಿದಿ ಹಣ.

ರಾಜ್ಯ ಸರ್ಕಾರ ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ಸೌಲಭ್ಯಗಳನ್ನು ಜಾರಿಗೊಳಿಸುತ್ತಿದೆ. ಇದೀಗ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಲಭಿಸಿದೆ.

ಈಗಾಗಲೆ ಸರ್ಕಾರದಿಂದ ವಿದ್ಯಾರ್ಥಿಗಳಿಗಾಗಿ ಸಾಕಷ್ಟು ವಿದ್ಯಾರ್ಥಿ ವೇತನದ (Scholarship) ಸೌಲಭ್ಯಗಳು ಜಾರಿಯಲ್ಲಿತ್ತು. ಅರ್ಹ ವಿದ್ಯಾರ್ಥಿಗಳು ವಿವಿಧ ವಿದ್ಯಾರ್ಥಿ ವೇತನದ ಪ್ರಯೋಜನವನ್ನು ಪಡೆದುಕೊಂಡಿದ್ದರು. ಇದೀಗ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗಾಗಿ ಹೊಸ ವಿದ್ಯಾರ್ಥಿ ವೇತನವನ್ನು ಪರಿಚಯಿಸಿದೆ.

ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ರಾಜ್ಯ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಿತದ್ರಷ್ಟಿಯಿಂದಾಗಿ ರಾಜ್ಯ ಸರ್ಕಾರ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಿದೆ. ಇದೀಗ ಆಟೋರಿಕ್ಷಾ ಚಾಲಕರು ಹಾಗೂ ಮೋಟಾರು ಕ್ಯಾಬ್ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಸ್ಕಾಲರ್ ಶಿಪ್ ನೀಡಲಾಗುತ್ತಿದೆ.

ಇಂದು ರಾಜ್ಯದ ಮುಖ್ಯಮಂತ್ರಿಗಳಾದ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಫಲಾನುಭವಿಗಳ ಖಾತೆಗೆ ನಗದು ನೇರ ವರ್ಗಾವಣೆ ಮಾಡಲಿದ್ದಾರೆ.

ವಿದ್ಯಾನಿಧಿ ಯೋಜನೆಯಡಿಯಲ್ಲಿ ವಾರ್ಷಿಕ ಶಿಷ್ಯ ವೇತನ ಬೊಮ್ಮಾಯಿ ಅವರು 15,000 ಫಲಾನುಭವಿಗಳ ಬ್ಯಾಂಕ್ ಖಾತೆಗೆ ನಗದು ನೇರ ಹಣ ವರ್ಗಾವಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಪಿಯುಸಿ, ಐಟಿಐ, ಡಿಪ್ಲೊಮೊ ಮುಂತಾದ ಪದವಿಗೂ ಮುನ್ನ ಪಡೆಯುವ ಶೈಕ್ಷಣಿಕ ವಿದ್ಯಾರ್ಥಿಗಳಿಗೆ ರೂ. 2,500 ಹಾಗೂ ವಿದ್ಯಾರ್ಥಿನಿಯರಿಗೆ ರೂ. 3,000 ,ಬಿಎ, ಬಿಎಸ್ಸಿ, ಬಿಕಾಂ ಮುಂತಾದ ಪದವಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ರೂ. 5,000 , ವಿದ್ಯಾರ್ಥಿನಿಯರಿಗೆ 5,500.

ಎಲ್ ಎಲ್ ಬಿ ಪ್ಯಾರಾಮೆಡಿಕಲ್, ಬಿ, ಫಾರ್ಮ್, ನರ್ಸರಿ ಇತ್ಯಾದಿ ವೃತ್ತಿಪರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ರೂ. 7,500 , ವಿದ್ಯಾರ್ಥಿನಿಯರಿಗೆ 8,000 . MBBS , ಬಿಇ. ಬಿಟೆಕ್ ಮತ್ತು ಎಲ್ಲ ಸ್ನಾತಕ್ಕೋತ್ತರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ರೂ. 10000 , ವಿದ್ಯಾರ್ಥಿನಿಯರಿಗೆ 11,000 ವಾರ್ಷಿಕ ಶಿಷ್ಯ ವೇತನ ನೀಡಲಾಗುವುದು.

LEAVE A RESPONSE

Your email address will not be published. Required fields are marked *