government Government Scheme scheme.

₹3.50 ಲಕ್ಷ ಉಚಿತ ಬೋರ್‌ವೆಲ್ ಸಹಾಯಧನಕ್ಕೆ ಅರ್ಜಿ ಆಹ್ವಾನ

 ಉಚಿತ ಬೋರ್‌ವೆಲ್ ಸಹಾಯಧನಕ್ಕೆ ಅರ್ಜಿ ಆಹ್ವಾನ

ರೈತರ ಆದಾಯ ದ್ವಿಗುಣಗೊಳಿಸುವ ಹಿನ್ನಲೆಯಲ್ಲಿ ಸರಕಾರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬಹುಮುಖ್ಯವಾಗಿ ಸಣ್ಣ ಮತ್ತಿ ಅತೀ ಸಣ್ಣ ರೈತರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ನೀರಾವರಿ ಅನುಕೂಲಕ್ಕಾಗಿ ವಿವಿಧ ನಿಗಮಗಳ ಮೂಲಕ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಉಚಿತ ಬೋರ್‌ವೆಲ್ ಯೋಜನೆಗಳಿದ್ದು; ಈ ಪೈಕಿ ಗಂಗಾಕಲ್ಯಾಣ ಯೋಜನೆ ಜನಪ್ರಿಯವಾಗಿದೆ. ಸದರಿ ಯೋಜನೆಯಡಿ ಅನೇಕ ರೈತರು ನೀರಾವರಿ ಅನುಕೂಲ ಹೊಂದುವ ಮೂಲಕ ಸುಸ್ಥಿರ ಆದಾಯ ಗಳಿಸುತ್ತಿದ್ದಾರೆ.

 

ಈ ಹಿನ್ನಲೆಯಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಒದಗಿಸಿದ ಪೂರಕ ಆಯವ್ಯಯದ ಅನುದಾನದಲ್ಲಿ ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತೀ ಸಣ್ಣ ರೈತರು ಗಂಗಾಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಆನ್‌ಲೈನ್ ಅರ್ಜಿ ಸಲ್ಲಿಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ 

ಯಾರೆಲ್ಲ ಅರ್ಹರು?

ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು ೩ಬಿಗೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ರೈತರು ಅರ್ಜಿ ಸಲ್ಲಿಸಬಹುದು.

 

ಗಂಗಾಕಲ್ಯಾಣ ನೀರಾವರಿ ಯೋಜನೆಗೆ ಅರ್ಜಿ ಸಲ್ಲಿಸುವ ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‌ನಲ್ಲಿರುವಂತೆ (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಹೊಂದಾಣಿಕೆಯಾಗಬೇಕು.

 

ಈ ಹಿಂದೆ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಈಗಾಗಲೇ 2022-23ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು

1.  ಜಾತಿ ಮತ್ತು ಆದಾಯ ಪ್ರಮಾಣ ಪತ್ರ

2.ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್

3. ಸಣ್ಣ/ಅತಿ ಸಣ್ಣ ರೈತರ ದೃಢೀಕರಣ ಪತ್ರ

4. ರೈತರ FID ಸಂಖ್ಯೆ. (ಇದನ್ನು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಭೇಟಿ ಮಾಡಿ ಪಡೆಯಬವುದು)

5. ಜಮೀನಿನ ಪಹಣಿ (RTC)

 

ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಜನವರಿ 17 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

 

ಯೋಜನೆಗಳ ವಿವರ

1. ವೈಯುಕ್ತಿಕ ನೀರಾವರಿ ಕೊಳವೆಬಾವಿ ಯೋಜನೆ ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ ಒಂದು ಎಕರೆ ಜಮೀನು ಹೊಂದಿರಬೇಕು. ಉಳಿದ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ ಎರಡು ಎಕರೆ ಜಮೀನು ಇರಬೇಕು. ಘಟಕವೆಚ್ಚ: ರೂ.2.50 ಲಕ್ಷಗಳು. ರೂ.2.00 ಲಕ್ಷಗಳ ಸಹಾಯಧನ (ಸಬ್ಸಿಡಿ) ಹಾಗೂ ವಾರ್ಷಿಕ ಶೇ.೪ರ ಬಡ್ಡಿದರದಲ್ಲಿ ರೂ.50,000/-ಗಳ ಸಾಲ. ರೂ.2.00 ಲಕ್ಷಗಳ ಸಹಾಯಧನದಲ್ಲಿ ಕೊಳವೆ ಬಾವಿ ಕೊರೆಯುವ ವೆಚ್ಚ, ಪಂಪ್‌ಸೆಟ್ ಅಳವಡಿಕೆ ಹಾಗೂ ಪೂರಕ ಸಾಮಗ್ರಿಗಳ ಸರಬರಾಜಿಗೆ ರೂ.1.50 ಲಕ್ಷಗಳ ವೆಚ್ಚ ಭರಿಸಲಾಗುವುದು.

 

ಕೊರೆದ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಆರ್.ಆರ್. ಸಂಖ್ಯೆ ನೀಡಿದ ನಂತರ ವಿದ್ಯುತ್ ಸರಬರಾಜು ಕಂಪನಿಗಳಿಗೆ ವಿದ್ಯುದ್ಧೀಕರಣ ವೆಚ್ಚವಾಗಿ ಪ್ರತಿ ಕೊಳವೆ ಬಾವಿಗಳಿಗೆ ರೂ.50,000/-ಗಳಂತೆ ಪಾವತಿಸಲಾಗುವುದು. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ವೈಯಕ್ತಿಕ ಕೊಳವೆ ಬಾವಿಯ ಘಟಕ ವೆಚ್ಚ ರೂ.4.00 ಲಕ್ಷಗಳು. ಇದರಲ್ಲಿ ರೂ.3.50 ಲಕ್ಷಗಳ ಸಹಾಯಧನ ಹಾಗೂ ರೂ.50,000/-ಗಳ ಸಾಲವಾಗಿರುತ್ತದೆ.

 

  1. ಸಾಮೂಹಿಕ ನೀರಾವರಿ ಕೊಳವೆಬಾವಿ ಯೋಜನೆ ಪ್ರವರ್ಗ-1, 2ಎ, 3ಎ ಮತ್ತು ೩ಬಿಗೆ ಸೇರಿದ ಕನಿಷ್ಠ ಮೂರು ಜನ ಸಣ್ಣ ಮತ್ತು ಅತಿಸಣ್ಣ ರೈತರು ಹೊಂದಿರುವ 8 ಎಕರೆ ಮತ್ತು ಅದಕ್ಕಿಂತ ಹೆಚ್ಚಿನ ಜಮೀನಿಗೆ ಸಾಮೂಹಿಕವಾಗಿ ನೀರಾವರಿ ಸೌಲಭ್ಯ ಪಡೆಯಬಹುದು. ಘಟಕ ವೆಚ್ಚ: 8ರಿಂದ 15 ಎಕರೆ ಜಮೀನಿಗೆ ರೂ.4.00 ಲಕ್ಷಗಳ ವೆಚ್ಚದಲ್ಲಿ 2 ಕೊಳವೆಬಾವಿ ಹಾಗೂ 15 ಎಕರೆಗಿಂತ ಹೆಚ್ಚು ಜಮೀನು ಒಳಪಡುವ ಘಟಕಗಳಿಗೆ ನಿಗದಿತ ಘಟಕ ವೆಚ್ಚ ರೂ.6.00 ಲಕ್ಷಗಳ ವೆಚ್ಚದಲ್ಲಿ 3 ಕೊಳವೆ ಬಾವಿಗಳನ್ನು ಕೊರೆಯಿಸಿ ಪಂಪ್‌ಸೆಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡುವುದು ಹಾಗೂ ವಿದ್ಯುದ್ದೀಕರಣಕ್ಕೆ ಠೇವಣಿ ಪಾವತಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸುವುದು. ಇದರಲ್ಲಿ ಯಾವುದೇ ಸಾಲವಿಲ್ಲ; ಸಂಪೂರ್ಣ ಉಚಿತ ಅನುದಾನವಾಗಿರುತ್ತದೆ.

 

ತೆರೆದಬಾವಿ: ವೈಯುಕ್ತಿಕ ನೀರಾವರಿ ಕೊಳವೆಬಾವಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದಬಾವಿ ನೀರಾವರಿ ಸೌಲಭ್ಯ ಒದಗಿಸಲು ಅವಕಾಶವಿರುತ್ತದೆ. 4. ಸಾಮೂಹಿಕ ಏತ ನೀರಾವರಿ ಯೋಜನೆ: ಭೂಮಟ್ಟದಲ್ಲಿ ಶಾಶ್ವತವಾಗಿ ದೊರೆಯುವ ಜಲಸಂಪನ್ಮೂಲಗಳಾದ ನದಿ, ಕೆರೆ, ಹಳ್ಳ ಇವುಗಳಿಗೆ ಮೋಟಾರ್ ಅಳವಡಿಸಿ ಪೈಪ್‌ಲೈನ್ ಮೂಲಕ ಖುಷ್ಕಿ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಿವುದು 

 

ಹೆಚ್ಚಿನ ಮಾಹಿತಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ದೂರವಾಣಿಗೆ 080-22374832 ಸಂಪರ್ಕಿಸಬಹುದು.

ಮತ್ತಷ್ಟು ವಿವರಗಳಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ

Click here

 

LEAVE A RESPONSE

Your email address will not be published. Required fields are marked *