ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದೂರು ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾರ್ಯವೈಖರಿ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಿರಿಯ ಸಚಿವರಾದ ಕೆ ಎಸ್ ಈಶ್ವರಪ್ಪನವರು ಮುಖ್ಯಮಂತ್ರಿಗಳ ಕಾರ್ಯವೈಖರಿಯ ಬಗ್ಗೆ ಮತ್ತು ಹಣವನ್ನು ಮಂಜೂರು ಮಾಡಿರುವ ಬಗ್ಗೆ ನೇರವಾಗಿ ರಾಜ್ಯಪಾಲರಿಗೆ ದೂರನ್ನು ಸಲ್ಲಿಸಿರುವುದು ಸರಿಯಾದ ಕ್ರಮ ಅಲ್ಲ ಎಂದು ಬಿ.ಸಿ.ಪಾಟೀಲ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಯಾವುದೇ ವಿಷಯಗಳು ಇದ್ದರೂ ಕೂಡ ಅದನ್ನು ಸಂಪುಟ ಸಭೆಯಲ್ಲಿ ಚರ್ಚಿಸಲು ಅವಕಾಶವಿದೆ. ಹೀಗಿದ್ದರೂ ಕೂಡ ಸಂಪುಟ ಸಭೆಯಲ್ಲಿ ಯಾವುದೇ ವಿಷಯವನ್ನು ಈಶ್ವರಪ್ಪನವರು ಪ್ರಸ್ತಾಪ ಮಾಡದೆ ಈ ರೀತಿ ನೇರವಾಗಿ ಏಕಾಏಕಿ ರಾಜ್ಯಪಾಲರಿಗೆ ದೂರು ಸಲ್ಲಿಸುವುದು ಹಿರಿಯರಾದ ಈಶ್ವರಪ್ಪನವರಿಗೆ ಶೋಭೆ ತರುವಂತಹದ್ದಲ್ಲ. ಯಾವುದೇ ತಪ್ಪನ್ನು ಮಾಡದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಪ್ಪು ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿರುವುದು ಎಷ್ಟು ಸರಿ? ಎಂದು ಬಿ.ಸಿ.ಪಾಟೀಲ್ ಪತ್ರಿಕಾ ಪ್ರಕಟಣೆ ಮೂಲಕ ಪ್ರಶ್ನಿಸಿದ್ದಾರೆ.
More Stories
ಸಿಎಮ್ ಪುತ್ರ ವಿಜಯೇಂದ್ರ ಕರ್ನಾಟಕದ ಸಾವಿರಾರು ಕೋಟಿ ಲೂಟಿ ಮಾಡಿದ್ದಾರೆ. ಇಷ್ಟರಲ್ಲೇ ಫೆಡರಲ್ ಬ್ಯಾಂಕ್ ಹಗರಣ ಹೊರಗೆ ಬರುತ್ತೆ. ಮೇ2 ರ ಒಳಗೆ ಸಿಎಮ್ ಬದಲಾವಣೆ ನಿಶ್ಚಿತ. – ಬಸನಗೌಡ ಪಾಟೀಲ ಯತ್ನಾಳ
“ಕೆಜೆಪಿಯಲ್ಲೇಕೆ ವಿಜಯೇಂದ್ರ ಮಾಯಮಂತ್ರ ಮಾಡಿಲ್ಲ? ಜಾತಿ ಬಿಟ್ಟರೆ ಅವನ ಬಳಿ ಬೇರೆ ಏನಿದೆ?”
ಶಾಸಕ ಬಸವನಗೌಡ ಪಾಟೀಲ ಯತ್ನಾಳಗೆ ಮಾಡೋಕೆ ಕೆಲಸ ಇಲ್ಲ, ಯತ್ನಾಳ ಅವರನ್ನ ಕರೆದುಕೊಂಡು ಬಂದಿದ್ದು ಕೂಡ ಯಡಿಯೂರಪ್ಪನವರೆ. -ಬಿ.ಸಿ. ಪಾಟೀಲ