July 25, 2021

ರಾಣೇಬೆನ್ನೂರಿನ KSRTC ನೌಕರರೆಲ್ಲಾ ಬೊಂಡಾ ಮಿರ್ಚಿ ಮಾಡ್ತಾ ಇದಾರೆ ಯಾಕೆ ಗೊತ್ತಾ..? ಈ ಸುದ್ದಿ ನೋಡಿ..!

ಹಾವೇರಿ- ಬೋಂಡಾ, ಭಜ್ಜಿ, ಮಿರ್ಚಿ, ಟೀ ಮಾರಿ ಸಾರಿಗೆ ನೌಕರರು ವಿನೂತನವಾಗಿ ಪ್ರತಿಭಟನೆ ಮಾಡಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ ಬಳಿ ನಡೆದಿದೆ.

ಸಾರಿಗೆ ನೌಕರರಿಗೆ ಆರನೇ ವೇತನ ಆಯೋಗ ಜಾರಿ, ಆರೋಗ್ಯ ಭಾಗ್ಯ ವಿಮಾ ಯೋಜನೆ, ಅಂತರ್ ನಿಗಮ ವರ್ಗಾವಣೆ ಕುರಿತು ಸೂಕ್ತ ನೀತಿ ಜಾರಿ ಸೇರಿದಂತೆ ವಿವಿಧ ಒಂಬತ್ತು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿನೂತನ ಪ್ರತಿಭಟನೆ ನಡೆಸಿದರು. ಬೋಂಡಾ, ಭಜ್ಜಿ, ಮಿರ್ಚಿ, ಟೀ ತಯಾರಿಸಿ ಮಾರಾಟ ಮಾಡುವ ಮೂಲಕ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಾರಿಗೆ ನೌಕರರ ಬೇಡಿಕೆ ಈಡೇರಿಸೋವರೆಗೂ ದಿನಕ್ಕೊಂದು ರೀತಿಯಲ್ಲಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ನಿರ್ಧಾರ ಮಾಡಿದ್ದಾರೆ. ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ತೊಂದರೆ ಆಗದಂತೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದರು.

 

____

Share this News
error: Content is protected !!