ಹಾವೇರಿ – ಕೃಷಿ ಸಚಿವ ಬಿ.ಸಿ.ಪಾಟೀಲರ ಮನೆಯಲ್ಲಿಯೇ ಕೊರೋನಾ ವಾಕ್ಸಿನ್ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕು ವೈದ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ.ವಿ.ತ್ರಿಲೋಕಚಂದ್ರ, ಟಿ.ಎಚ್.ಓ. ಡಾ.ಝಡ್.ಆರ್. ಮಕಾಂದಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 2 ರಂದು ಕೃಷಿ ಸಚಿವ ಬಿ.ಸಿ.ಪಾಟೀಲ ಮನೆಯಲ್ಲಿಯೇ ದಂಪತಿಗೆ ವಾಕ್ಸಿನ್ ನೀಡಿ ದೊಡ್ಡಮಟ್ಟದ ವಿವಾದವಾಗಿತ್ತು. ಅಲ್ಲದೆ ಮನೆಯಲ್ಲಿಯೇ ಲಸಿಕೆ ನೀಡಿದ್ದಕ್ಕೆ ಹಾವೇರಿಯ ಡಿ.ಎಚ್.ಓ ಕಾರಣ ಕೇಳಿ ನೋಟೀಸ್ ನೀಡಿದ್ದರು. ಈಗ ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ.ವಿ.ತ್ರೀಲೋಕಚಂದ್ರ ಸೇವೆಯಿಂದ ಅಮಾನತು ಮಾಡಿ ಆದೇಶ ಮಾಡಿದ್ದಾರೆ.
“ಎರಡನೇಯ ಲಸಿಕೆಯನ್ನು ಆಸ್ಪತ್ರೆಯಲ್ಲಿ ಹಾಕಿಸಿಕೊಂಡ ಕೃಷಿ ಸಚಿವ ಬಿ.ಸಿ.ಪಾಟೀಲ”
ವಿವಾದದ ನಂತರ ಎಚ್ಚತ್ತ ಕೃಷಿ ಸಚಿವ ಬಿ.ಸಿ.ಪಾಟೀಲ ಎರಡನೆ ಹಂತದ ಲಸಿಕೆಯನ್ನ ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕು ಸರಕಾರಿ ಆಸ್ಪತ್ರೆಯಲ್ಲಿ ಪಡೆದುಕೊಂಡಿದ್ದಾರೆ.
ಮಾರ್ಚ್ ೨ ರಂದು ಮೊದಲನೆ ಹಂತದ ಲಸಿಕೆಯನ್ನ ಬಿ.ಸಿ.ಪಾಟೀಲ ಹಾಗೂ ಪತ್ನಿ ಮನೆಯಲ್ಲಿ ಲಸಿಕೆ ಹಾಕಿಸಿಕೊಂಡು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ ಮನೆಯಲ್ಲಿಯೇ ವಾಕ್ಸಿನ್ ನೀಡಿದ ತಾಲೂಕು ಆರೋಗ್ಯಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ನೋಟೀಸ್ ನೀಡಿದ ಆರೋಗ್ಯ ಇಲಾಖೆ, ಈಗ ವೈದ್ಯಾಧಿಕಾರಿ ಡಾ.ಝಡ್.ಆರ್.ಮಕಾಂದಾರ್ ಅಮಾನತು ಮಾಡಿ ಆದೇಶ ನೀಡಿದೆ.
ವಿವಾದದ ನಂತರ ಆಸ್ಪತ್ರೆಗೆ ಹೋಗಿ ಆಸ್ಪತ್ರೆಯಲ್ಲಿ ಎರಡನೆ ಹಂತದ ಲಸಿಕೆಯನ್ನ ಸಚಿವ ಬಿ.ಸಿ. ಪಾಟೀಲ ಹಾಕಿಸಿಕೊಂಡಿದ್ದಾರೆ. ಎರಡನೆ ಹಂತದ ಲಸಿಕೆ ಹಾಕಿಸಿಕೊಂಡದ್ದನ್ನ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿಕೊಂಡಿದ್ದು, ೪೫ ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರು ಸ್ವಯಂ ಪ್ರೇರಿತವಾಗಿ ಕೊವೀಡ್ ಲಸಿಕೆಯನ್ನ ಪಡೆದುಕೊಳ್ಳಿ, ಲಸಿಕೆ ಪಡೆದುಕೊಂಡು, ಕೊರೋನಾ ಸೋಂಕಿನಿಂದ ದೂರ ಇರಬೇಕು ಎಂದಿದ್ದಾರೆ.
___________
More Stories
ಜನತಾ ಕರ್ಫ್ಯೂ ಪಾಲನೆ ಮಾಡಿ, ಕೋವಿಡ್ ಚಿಕಿತ್ಸೆಗೆ ನ್ಯೂನ್ಯತೆಯಾಗದಂತೆ ಮುನ್ನೆಚ್ಚರಿಕೆ: ಶಿಗ್ಗಾಂವ-ಸವಣೂರ ಆಸ್ಪತ್ರೆಗೆ ಡಿಸಿ ಭೇಟಿ ಪರಿಶೀಲನೆ..!
ಕೊರೋನಾ ಎರಡನೇಯ ಅಲೆಯ ಸೋಂಕು ಹೆಚ್ಚಳ: ಕರ್ನಾಟಕದಲ್ಲಿ ಭಾಗಶಃ ಲಾಕ್ ಡೌನ್..!
ಕೋವಿಡ್ ಮೆಡಿಕಲ್ ಎಮರ್ಜೆನ್ಸಿಗೆ ಸಿದ್ದರಾಗಿ: ಸಚಿವ ಬಸವರಾಜ ಬೊಮ್ಮಾಯಿ ಶಿಗ್ಗಾಂವ್ ಸವಣೂರಿನ ಅಧಿಕಾರಿಗಳಿಗೆ ಕಡಕ್ ಆದೇಶ, ಮನೆ ಮನೆಗೆ ತೆರಳಿ ತಪಾಸಣೆ ಮಾಡುವಂತೆ ಸೂಚನೆ..!