April 22, 2021

ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿದರೆ ನಾನು ಸಿಎಂ, ಅರ್ಜೆಂಟ್ ನಲ್ಲಿದ್ದಾರೆ ಸಿದ್ದರಾಮಯ್ಯ.- ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಯಡಿಯೂರಪ್ಪ ನವರೇ ರಾಜ್ಯದ ಮುಖ್ಯಮಂತ್ರಿ ಯಾವುದೇ ಕಾರಣಕ್ಕೂ ಸಿ.ಎಂ.ಬದಲಾವಣೆಯಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕೂ ಯಡಿಯೂರಪ್ಪ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಸಿದ್ದರಾಮಯ್ಯ ಸಿಎಂ ಆಗುವ ಭ್ರಮೆ ಇಟ್ಟುಕೊಳ್ಳುವುದು ಬೇಡ ಎಂದು ಟೀಕಿಸಿದರು.
ನಾನು ಬರೆದ ಪತ್ರ ಉಪಚುನಾವಣೆಯಲ್ಲಿ ವಿಪಕ್ಷಗಳಿಗೆ ಅಸ್ತ್ರವಾಗುವುದಿಲ್ಲ. ಈ ವಿಷಯವಿಲ್ಲದಿದ್ದರೆ ಬೇರೆ ಅಸ್ತ್ರಗಳನ್ನು ವಿಪಕ್ಷಗಳು ಹುಡುಕುತ್ತಿದ್ದವು. ಉಪಚುನಾವಣೆ ನಡೆಯುವ ಕ್ಷೇತ್ರಗಳ ಮನೆಗಳಿಗೂ ತೆರಳಿ ಮತದಾರರ ಮನವೊಲಿಸಲಾಗಿದೆ. ಕೇಂದ್ರ‌, ರಾಜ್ಯ ಸರ್ಕಾರಗಳು ಉತ್ತಮವಾಗಿ ಕೆಲಸ ಮಾಡುತ್ತಿವೆ. ಈ ಬಗ್ಗೆ ವಿಪಕ್ಷಗಳಿಗೆ ಅರೋಪ ಮಾಡಲು ಆಗುತ್ತಿಲ್ಲ. ಹೀಗಾಗಿ ನಾನು ಬರೆದ ಪತ್ರವನ್ನು ಇಟ್ಟುಕೊಂಡು ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿವೆ.

ಜೊತೆಗೆ ಸಿದ್ದರಾಮಯ್ಯನವರು ಅರ್ಜೆಂಟಾಗಿ ಮುಖ್ಯಮಂತ್ರಿಯಾಗಬೇಕು ಎಂದುಕೊಂಡಿದ್ದಾರೆ. ಜನ ಸಿದ್ದರಾಮಯ್ಯ ಅವರನ್ನು ತಿರಸ್ಕರಿಸಿದ್ದಾರೆ. ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಮುಖ್ಯಮಂತ್ರಿ‌ ಸ್ಥಾನ ಕಳೆದುಕೊಂಡರು. ಇದೀಗ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿದರೆ ನಾನು ಸಿಎಂ ಆಗುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ ಎಂದರು.

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!