April 22, 2021

ಏಪ್ರಿಲ್ 20ರವರೆಗೆ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ-ಡಿಡಿಪಿಐ ಅಂದಾನೆಪ್ಪ ವಡಗೇರಿ

ಹಾವೇರಿ – ಕೋವಿಡ್-19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರ ಸೂಚನೆ ಮೇರೆಗೆ ಜಿಲ್ಲೆಯಲ್ಲಿ ವಿದ್ಯಾಗಮ ಕಾರ್ಯಕ್ರಮ ಸೇರಿದಂತೆ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಏಪ್ರಿಲ್ 3 ರಿಂದ ಏ.20ರವರೆಗೆ ರಜೆ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ಅವರು ತಿಳಿಸಿದ್ದಾರೆ.

 

ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯ ಶಿಕ್ಷಕರು, ಆಡಳೀತ ಮಂಡಳಿಯವರಿಗೆ ಮಾಹಿತಿ ನೀಡಿ ಏಪ್ರಿಲ್ 20ರವರೆಗೆ 6 ರಿಂದ 9ನೇ ತರಗತಿಗಳನ್ನು ನಡೆಸದಂತೆ ಸೂಚನೆ ನೀಡಲು ತಿಳಿಸಲಾಗಿದೆ. ವಸತಿ ನಿಲಯಗಳಲ್ಲಿನ 10ನೇ ತರಗತಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. 10 ತರಗತಿಗಳು ಯಥಾ ಸ್ಥಿತಿಯಲ್ಲಿ ಮುಂದುವರೆಯುತ್ತವೆ ಎಂದು ತಿಳಿಸಿದ್ದಾರೆ.

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!