April 22, 2021

ಹಾವೇರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಎರಡನೇಯ ಕೊರೋನಾ ಅಲೆಗೆ ಮೊದಲ ಬಲಿ…!

ಹಾವೇರಿ – ದೇಶದ ಹಾಗೂ ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರ್ಭಟ ಹೆಚ್ಚಾಗಿದೆ. ಹಾವೇರಿ ಜಿಲ್ಲೆಯಲ್ಲಿ ‌ಕೊರೋನಾ ಆರ್ಭಟಕ್ಕೆ ಒಂದು ಬಲಿಯಾಗಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲ್ತಿದ್ದ 75 ವರ್ಷದ ವೃದ್ಧ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಹಾವೇರಿ ಜಿಲ್ಲೆ ಸವಣೂರು ಮೂಲದ 75 ವರ್ಷದ ವೃದ್ಧ ಇವತ್ತು ಸಾವನ್ನಪ್ಪಿದ್ದಾನೆ.

ಇವತ್ತು ಜಿಲ್ಲೆಯಲ್ಲಿ 7 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಹಾವೇರಿ ತಾಲೂಕಿನಲ್ಲಿ 3, ಶಿಗ್ಗಾಂವಿ ತಾಲೂಕಿನಲ್ಲಿ ಇಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಬ್ಯಾಡಗಿ ಮತ್ತು ರಾಣೆಬೆನ್ನೂರು ತಾಲೂಕಿನಲ್ಲಿ ತಲಾ ಒಬ್ಬರಿಗೆ ಕೊರೋನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ 33 ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಘವೇಂದ್ರಸ್ವಾಮಿ ಎಚ್.ಎಸ್ ಮಾಹಿತಿ ನೀಡಿದ್ದಾರೆ..

 

______,

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!