June 22, 2021

ಪೆಟ್ರೋಲ್ ಡಿಸೇಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರಕಾರದ ವಿರುದ್ದ ಕಾಂಗ್ರೇಸ್ ಪ್ರತಿಭಟನೆ

ಹಾವೇರಿ- ಪೆಟ್ರೋಲ್, ಡಿಸೇಲ್ ಮತ್ತು ಸಿಲಿಂಡರ್‌ ಬೆಲೆ ಏರಿಕೆಗೆ ವಿರೋಧಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನೆ ಆರಂಭಿಸಿ ನಗರದ ಪ್ರಮುಖ ಬೀದಿಯಲ್ಲಿ ಸಂಚರಿಸಿ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಪ್ರತಿಭಟನೆ ನಡೆಸಿದರು.

ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ದೆಹಲಿಯಲ್ಲಿ ಸಾವನ್ನಪ್ಪಿದ‌ ಧರಣಿನಿರತ ಹುತಾತ್ಮ ರೈತರಿಗೆ ಮೌನಾಚರಣೆ ನಡೆಸಿ ಗೌರವ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣವರ, ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

_____

Share this News
error: Content is protected !!