July 25, 2021

ಯುಗಾದಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ..!?

ಚಾಮರಾಜನಗರ: ಈಗ ಯುಗಾದಿ ಹಬ್ಬ ಇನ್ನೇನು ಬಂತು. ಯುಗಾದಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಲಿಲ್ಲವೆಂದು 13 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ‌ ಗಡಿ‌ ಜಿಲ್ಲೆ ಚಾಮರಾಜನಗರದ ಕೊಳ್ಳೆಗಾಲದಲ್ಲಿ ನಡೆದಿದೆ.

ಕೊಳ್ಳೇಗಾಲದ ಬಸ್ತೀಪುರ ಬಡಾವಣೆಯ ಬಸವರಾಜು ಎಂಬುವವರ ಮಗಳಾದ ವಿದ್ಯಾರ್ಥಿನಿ ಹರ್ಷಿತಾ 13 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

ಯುಗಾದಿ ಹಬ್ಬಕ್ಕೆ ಹೊಸ ಬಟ್ಟೆ ತೆಗೆದುಕೊಡಿ ಎಂದು ಕೇಳಿದಾಗ ಆಕೆಯ ಪೋಷಕರ ಸಂಬಳವಾದ ಬಳಿಕ ಎಲ್ಲರೂ ಸೇರಿ ಬಟ್ಟೆ ತೆಗೆದುಕೊಳ್ಳೋಣ ಎಂದು ಹೇಳಿದ್ದಾರೆ. ಅಷ್ಟಕ್ಕೇ ಬೇಸರಗೊಂಡ ಬಾಲಕಿ, ಯಾರು ಇಲ್ಲದ ಸಮಯದಲ್ಲಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಕೊಳ್ಳೇಗಾಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share this News
error: Content is protected !!