May 19, 2021

ಸಾರಿಗೆ ನೌಕರರ ಮುಷ್ಕರ ನಾಲ್ಕನೇಯ ದಿನಕ್ಕೆ: ಮುಷ್ಕರಕ್ಕೆ ಬೆಂಬಲಿಸಿದ ನೌಕರರಿಗೆ ವರ್ಗಾವಣೆ ಅಸ್ರ್ತ..!?

ಹಾವೇರಿ – ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ
ನಾಲ್ಕನೆ ದಿನಕ್ಕೆ ಕಾಲಿಟ್ಟಿದೆ. ಮುಷ್ಕರಕ್ಕೆ ಬೆಂಬಲಿಸಿದ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಸಾರಿಗೆ ಸಿಬ್ಬಂದಿ ಮೇಲೆ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ್ದಾರೆ.

ಹಾವೇರಿ ಡಿಪೋದ 17 ಜನ ಸಿಬ್ಬಂದಿಗಳನ್ನು ಸಂಸ್ಥೆಯ ಹಿತದೃಷ್ಟಿ ಮತ್ತು ಆಡಳಿತಾತ್ಮಕ ಕಾರಣಕ್ಕೆ ಅಂತಾ ಹೇಳಿ ಸಾರಿಗೆ ನೌಕರರನ್ನು ವರ್ಗಾವಣೆ ಮಾಡಿ ಅಧಿಕಾರಿಗಳು ಅದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಬೇರೆ ಬೇರೆ ಡಿಪೋಗಳಿಗೆ ಸಿಬ್ಬಂದಿ ವರ್ಗಾವಣೆ ಮಾಡಿ ಆದೇಶವನ್ನು ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಆದೇಶ ಮಾಡಿದ್ದಾರೆ. ಮುಷ್ಕರಕ್ಕೆ ಬೆಂಬಲಿಸಿ ಕೆಲಸಕ್ಕೆ ಗೈರಾಗಿದ್ದ ಸಿಬ್ಬಂದಿಗಳಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!