June 22, 2021

SHIGGOAN | ರಸ್ತೆಯ ಮದ್ಯದಲ್ಲಿ ಚಹಾ ಮಾಡಿ ಕುಡಿದು ಪ್ರತಿಭಟನೆ.

ಶಿಗ್ಗಾಂವಿ – ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ರಸ್ತೆಯಲ್ಲಿ ಚಹಾ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಶಿಗ್ಗಾಂವಿ ಪಟ್ಟಣದಲ್ಲಿ ಪ್ರಮುಖ ಬೀದಿಯಲ್ಲಿ ಸಂಚಾರ ‌ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೃಷಿ ಕಾಯ್ದೆ ವಿರೋಧಿ ಕಾಂಗ್ರೇಸ್ ಪ್ರತಿಭಟನೆ ನಡೆಸಿದರು. ತಾಲೂಕು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆ ಶಿಗ್ಗಾಂವಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಹಾಗೂ ಮಾಜಿ‌ ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ್. ಶ್ರೀಕಾಂತ ದುಂಡಿಗೌಡರ , ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷರು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದರು.

Share this News
error: Content is protected !!