May 19, 2021

ಹಾವೇರಿ ಜಿಲ್ಲೆಯಾದ್ಯಂತ ಗುಡುಗು ಸಿಡಿಲು ಸಮೇತ ಮಳೆ: ಸಿಡಿಲಿನ ಹೊಡೆತಕ್ಕೆ ಹೊತ್ತಿ ಉರಿದ ತೆಂಗಿನಮರ..!

ಹಾವೇರಿ – ಹಾವೇರಿ ಜಿಲ್ಲೆಯ ಹಲವೆಡೆ ಗುಡುಗು ಸಿಡಿಲು ಸಮೇತ ಧಾರಾಕಾರ ಮಳೆಯಾಗಿದೆ. ಸಂಜೆಯಾಗುತ್ತಿದ್ದಂತೆ
ಹಾವೇರಿ ನಗರ, ಸವಣೂರು ತಾಲ್ಲೂಕಿನ ಮೆಳಾಗಟ್ಟಿ, ಕುರುಬರ ಮಲ್ಲೂರು ಗ್ರಾಮದಲ್ಲಿ ಧಾರಾಕಾರ ಮಳೆಯಾಗಿದೆ.

ಹಾವೇರಿ ತಾಲೂಕಿನ ಕಿತ್ತೂರು, ಮರಡೂರು, ಸೇರಿದಂತೆ ಹಲವೆಡೆ ಗುಡುಗು ಸಿಡಿಲು ಸಮೇತ ಮಳೆಯಾಗಿದೆ. ರಾಣೇಬೆನ್ನೂರು ತಾಲೂಕಿನ ಕೆರಿಮಲ್ಲಾಪುರ ಗ್ರಾಮದಲ್ಲಿ ತೆಂಗಿನಮರಕ್ಕೆ ಸಿಡಿಲು ಬಡಿದು ತೆಂಗಿನಮರ ಹೊತ್ತಿ ಉರಿದಿದೆ.

ಜಿಲ್ಲೆಯಲ್ಲಿ ಧಾರಾಕಾರ ಸುರಿದ ಮಳೆಯಿಂದ ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಬಿರುಗಾಳಿ, ಗುಡುಗು ಸಿಡಿಲಿಗೆ ಕೆಲವೆಡೆ ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿತ್ತು.

 

_________

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!