May 19, 2021

ವಿಧಾನ‌ಪರಿಷತ್ ಸದಸ್ಯ ಶ್ರಿನಿವಾಸ ಮಾನೆಗೆ ಕೊರೋನಾ ಸೋಂಕು: ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿ, ಅಭಿಮಾನಿಗಳಿಂದ ಪೂಜೆ..!

ಹಾನಗಲ್- ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆಗೆ ಕೊರೊನಾ ಸೋಂಕು ಹಿನ್ನೆಲೆ, ಹಾನಗಲ್ ತಾಲೂಕಿನ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಾನೆ ಅಭಿಮಾನಿಗಳಿಂದ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಿದ್ದಾರೆ. ಮಾನೆಯವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಅಭಿಮಾನಿಗಳು ಪೂಜೆ ಸಲ್ಲಿಸಿದರು.

ಹಾನಗಲ್ ತಾಲೂಕಿನ ಸೋಮಸಾಗರ, ತಿಳುವಳ್ಳಿ, ಕರಗುದರಿ, ಹಾನಗಲ್ ಪಟ್ಟಣ ಸೇರಿದಂತೆ ಹಲವೆಡೆ ಅಭಿಮಾನಿಗಳಿಂದ, ಮುಸ್ಲಿಂ ಬಾಂಧವರಿಂದ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಸಧ್ಯ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಹುಬ್ಬಳ್ಳಿಯ ನಿವಾಸದಲ್ಲಿ ಹೋಂ‌ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

______

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!