May 19, 2021

ಕೊರೋನಾದಿಂದ‌ ಮುಕ್ತಿ ಪಡೆದ ಸಿಎಮ್: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಯಡಿಯೂರಪ್ಪ..!

ಬೆಂಗಳೂರು: ಕೊರೊನಾ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸಿಎಂ ಯಡಿಯೂರಪ್ಪನವರಿಗೆ ಎರಡನೇ ಬಾರಿ ಕೊರೊನಾ ಸೋಂಕು ತಗುಲಿತ್ತು. ಏಪ್ರಿಲ್ 16ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಸೂಕ್ತ ಚಿಕಿತ್ಸೆ ಬಳಿಕ ಇದೀಗ ಗುಣಮುಖರಾಗಿರುವ ಮುಖ್ಯಮಂತ್ರಿಗಳಿಗೆ ಕೋವಿಡ್ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಕೊರೊನಾ ಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯದ ಜನರು ಅನಗತ್ಯವಾಗಿ ಮನೆಯಿಂದ ಹೊರಗೆ ಬರಬೇಡಿ. ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮಗಳನ್ನು ಜಾರಿ ಮಾಡಿದೆ. ಜನರು ಸರ್ಕಾರದ ನಿಯಮವನ್ನು ಪಾಲನೆ ಮಾಡಿ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರವನ್ನು ಕಾಪಾಡಿ ಎಂದು ಮನವಿ ಮಾಡಿದರು.

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!