July 25, 2021

ಆಕಸ್ಮಿಕ ಬೆಂಕಿ: ಸುಮಾರು ಏಳು ನೂರು ಕ್ವಿಂಟಲ್ ಗೂ ಅಧಿಕ ಮೆಕ್ಕೆಜೋಳ ಸುಟ್ಟು ಭಸ್ಮ..!

ಹಾವೇರಿ- ಆಕಸ್ಮಿಕ ಬೆಂಕಿ‌ ಹತ್ತಿಕೊಂಡ ಪರಿಣಾಮ ರಾಶಿ ಮಾಡಲು ಸಂಗ್ರಹಿಸಿಟ್ಟಿದ್ದ ಮೆಕ್ಕೆಜೋಳದ ತೆನೆಗಳು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಎಂಟು ಜನರಿಗೆ ಸೇರಿದ ಮೆಕ್ಕೆಜೋಳ ರಾಶಿಯಾಗಿದ್ದು, 20ಎಕರೆಯಲ್ಲಿ ಜಮೀನಿನಲ್ಲಿ ಬೆಳೆದಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಲಕ್ಷಾಂತರ ರುಪಾಯಿ ಮೌಲ್ಯದ ಸುಮಾರು ಏಳು ನೂರು ಕ್ವಿಂಟಲ್ ಗೂ ಅಧಿಕ ಮೆಕ್ಕೆಜೋಳ ಹಾನಿಯಾಗಿದೆ.

ಅಲ್ಲದೇ ಸ್ಥಳಕ್ಕೆ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸರಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ

Share this News
error: Content is protected !!