July 25, 2021

CORONA BREAKING| ಕೊರೋನಾ ಎರಡನೇ ಅಲೆ: ಸೋಂಕಿಗೆ ಇಂದು ಇಬ್ಬರು ಸಾವು, ಹಾವೇರಿ ಜಿಲ್ಲೆಯಲ್ಲಿ ಇದುವರೆಗೆ 6 ಜನರು ಬಲಿ..!

ಹಾವೇರಿ – ಹಾವೇರಿ ಜಿಲ್ಲೆಯಲ್ಲಿ ಕೊರೋನಾ ತನ್ನ ಅರ್ಭಟ ಮುಂದುವರೆಸಿದೆ. ಕೊರೋನಾ ಎರಡನೇ ಅಲೆಯ ಅಬ್ಬರಕ್ಕೆ ಇವತ್ತು ಇಬ್ಬರು ಬಲಿಯಾಗಿದ್ದು, ಒಟ್ಟು ಜಿಲ್ಲೆಯಲ್ಲಿ ಆರು ಜನರು ಸೋಂಕಿಗೆ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಇವತ್ತು ಕೊರೋನಾದಿಂದ ಮೃತಪಟ್ಟ ಇಬ್ಬರ ಸಾವನ್ನು ಆರೋಗ್ಯ ಇಲಾಖೆ ದೃಢೀಕರಿಸಿದೆ. ಹಾವೇರಿ‌ ಜಿಲ್ಲೆ ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದ 70 ವರ್ಷದ ಪುರುಷ ಮತ್ತು ಹಾವೇರಿ ನಗರದ ನಾಗೇಂದ್ರನಮಟ್ಟಿಯ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಏಪ್ರೀಲ್ 16,ರಂದು ತೀವ್ರ ಉಸಿರಾಟದ ಸಮಸ್ಯೆಯಿಂದ ಇಬ್ಬರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅಂದೇ ರ್ಯಾಪಿಡ್ ಯಾಂಟಿಜನ್ ಕಿಟ್ ಮೂಲಕ ಮೂಗಿನ ದ್ರವ ಚೆಕ್ ಮಾಡಿದಾಗ ಇಬ್ಬರಲ್ಲಿ ಸೋಂಕು ದೃಢಪಟ್ಟಿತ್ತು, ಆದರೆ ‌ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೋವಿಡ್19 ನಿಯಮಾವಳಿಯಂತೆ ಮೃತರ ಅಂತ್ಯಕ್ರಿಯೆ ಮಾಡಲಾಗಿದೆ. ಇವತ್ತು ಜಿಲ್ಲೆಯಲ್ಲಿ 74 ಜನರಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ 338 ಪ್ರಕರಣಗಳು ಸಕ್ರೀಯವಾಗಿವೆ. ಒಟ್ಟು ಜಿಲ್ಲೆಯಲ್ಲಿ ಈವರೆಗೆ 201 ಜನರು ಕೊರೋನಾದಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಘವೇಂದ್ರಸ್ವಾಮಿ. ಎಚ್.ಎಸ್ ಮಾಹಿತಿ ನೀಡಿದ್ದಾರೆ.

 

______

Share this News
error: Content is protected !!