May 19, 2021

ಕೊರೋನಾ ಎಫೆಕ್ಟ್: ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಡಿದ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ..!

ಬೆಂಗಳೂರು : ನಮ್ಮ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.‌ ಗಿಡಿಗಳನ್ನು ಮಕ್ಕಳಂತೆ ಬೆಳೆಸಿ ಪರಿಸರ ಪ್ರೇಮ ಮೆರದ ಸಾಲುಮರದ ತಿಮ್ಮಕ್ಕರಿಗೆ, ಇವತ್ತು ಅಪೋಲೋ ಆಸ್ಪತ್ರೆಯಲ್ಲಿ ಬೆಡ್ ಸಮಸ್ಯೆ ಎದುರಾಗಿದ್ದು ಪರದಾಟ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮನೆಯಲ್ಲಿ ಬಿದ್ದು ಬೆನ್ನುಮೂಳೆ ಮುರಿತವಾಗಿದ್ದರಿಂದ ಸಾಲು ಮರದ ತಿಮ್ಮಕ್ಕನವರಿಗೆ ಇತ್ತಿಚೆಗೆ ಚಿಕಿತ್ಸೆಯಾಗಿತ್ತು. ಆದರೆ ಇವತ್ತು ಬೆನ್ನು ನೋವು ಮತ್ತೆ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಯಲ್ಲಿ ನಾನ್ ಕೋವಿಡ್ ರೋಗಿಗಳಿಗೆ ಬೆಡ್ ಸಮಸ್ಯೆ ಎದುರಾಗಿದ್ದು, ಸಾಲುಮರದ ತಿಮ್ಮಕ್ಕ ಕೂಡ ಹಾಸಿಗೆಗಾಗಿ ಪರದಾಡುವಂತಾಗಿದೆ. ಸುಮಾರು 2 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ಹಾಸಿಗಾಗಿ ಪರದಾಟ ನಡೆಸಿದ್ದಾರೆ. ನಾನ್ ಕೋವಿಡ್ ಬೆಡ್ ಹೊಂದಿಸಲು ವೈದ್ಯರು ಕೂಡ ಪ್ರಯತ್ನ ನಡೆದಿದ್ದಾರೆ.

ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾನ್ ಕೊವೀಡ್ ರೋಗಿಗಳು ಬೆಡ್ ಸಿಗದೆ ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ. ಇನ್ನಾದರೂ ಸರ್ಕಾರದ ನಾನ್ ಕೊವೀಡ್ ರೋಗಿಗಳಿಗೆ ಬೇರೆ ವ್ಯವಸ್ಥೆ ಮಾಡಬೇಕಿದೆ.

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!