May 19, 2021

ಆಕ್ಸಿಜನ್ ಕೊರತೆ: ದೆಹಲಿಯಲ್ಲಿ 20 ಮಂದಿ ಸಾವು ಅಪಾಯದಲ್ಲಿ ಕೊರೋನಾ ಸೋಂಕಿತರು..!

ದೆಹಲಿ : ದೇಶದಲ್ಲಿ ಎರಡನೇ ಅಲೆ ಕೊರೋನಾ ಅರ್ಭಟ ಮುಂದುವರೆದಿದೆ. ನಿತ್ಯ ಸಾವಿರಾರು ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಆಕ್ಸಿಜನ್ ಕೊರತೆಯಿಂದ 20 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, 200 ಕ್ಕೂ ಅಧಿಕ ಮಂದಿ ಸೋಂಕಿತರು ಪರದಾಡುವ ಪರಸ್ಥಿತಿ ದೆಹಲಿಯಲ್ಲಿ ನಡೆದಿದೆ.

ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿ ಸುಮಾರು 200 ಮಂದಿ ಕೊರೊನಾ ಸೋಂಕಿತರು ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಆಮ್ಲಜನಕ ಕೊರತೆಯಿಂದಾಗಿ 20 ಮಂದಿ ಸಾವನ್ನಪ್ಪಿದ್ದಾರೆ. 80 ಮಂದಿಗೆ ಆಮ್ಲಜನಕ ಒದಗಿಸಲಾಗಿದೆ. 35 ಮಂದಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಿಕೆ ಬಲೂಜಾ ತಿಳಿಸಿದ್ದಾರೆ.

ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ 25 ರೋಗಪೀಡಿತ ರೋಗಿಗಳು ಸಾವನ್ನಪ್ಪಿದ ಒಂದು ದಿನದ ನಂತರ ಈ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಎರಡು ಗಂಟೆಗಳ ಕಾಲ ಆಕ್ಸಿಜನ್ ಇದೆ ಮತ್ತು ಇನ್ನೂ 60 ರೋಗಿಗಳು ಅಪಾಯದಲ್ಲಿದ್ದಾರೆ ಎನ್ನಲಾಗಿದೆ.

ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆಕ್ಸಿಜನ್ ಸಮಸ್ಯೆ ಹೆಚ್ಚಾಗುತ್ತಿದ್ದು, ರೋಗಿಗಳು ಆಸ್ಪತ್ರೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಸರ್ಕಾರ ಆಕ್ಸಿಜನ್ ವ್ಯವಸ್ಥೆ ಕಠಿಣ ಕ್ರಮ ಹಾಗೂ ಆಕ್ಸಿಜನ್ ವ್ಯವಸ್ಥೆ ಮಾಡಬೇಕಿದೆ.

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!