May 19, 2021

ಕ್ಷೇತ್ರದ ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ನೆರವು: ಕೋವಿಡ್ ಆಸ್ಪತ್ರೆಯ ಸಂಪೂರ್ಣ ವೆಚ್ಚವನ್ನು ಭರಿಸಲು ಬಿ.ಸಿ. ಪಾಟೀಲ ನಿರ್ಧಾರ..!

ಹಾವೇರಿ – ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾವೇರಿ ಜಿಲ್ಲೆ ಹಿರೇಕೆರೂರು ಶಾಸಕ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ ತಮ್ಮ ಕ್ಷೇತ್ರದ ಜನರು ಕೊವೀಡ್-19 ಸೋಂಕಿತರಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಡವರಿಗೆ ಸಂಪೂರ್ಣ ಚಿಕಿತ್ಸೆ ವೆಚ್ಚ ಭರಿಸುವ ನಿರ್ಧಾರ ಮಾಡಿದ್ದಾರೆ.

ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲ್ಲೂಕು ಕ್ಷೇತ್ರದ ಬಿಪಿಎಲ್ ಕಾರ್ಡ್ ಹೊಂದಿರುವ ಕ್ಷೇತ್ರದ ಬಡವರಿಗೆ ನೆರವು ನೀಡುವ ನಿರ್ಧಾರ ಮಾಡಿದ್ದಾರೆ. ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ ಪಡೆಯುವ ಬಿಪಿಎಲ್ ಕಾರ್ಡ ಹೊಂದಿದ್ದು, ಚಿಕಿತ್ಸೆ ಪಡೆದ ಬಡವರು ಗುರುತಿನ ಚೀಟಿ, ಬಿಪಿಎಲ್ ಕಾರ್ಡ್ ಹಾಗೂ ಆಸ್ಪತ್ರೆ ಬಿಲ್ ನೀಡಿದರೆ ವೆಚ್ಚವನ್ನು ಭರಿಸುತ್ತೇನೆ ಎಂದು ಕೃಷಿ ಬಿ.ಸಿ.ಪಾಟೀಲ ಹೇಳಿದ್ದಾರೆ.

ಮಹಾಮಾರಿ ಕೊರೋನಾ ವಿಶ್ವವ್ಯಾಪಿಯಾಗಿ ಹೆಚ್ಚು ಸೋಂಕು ಹರಡುತ್ತಿದೆ. ಸರ್ಕಾರ ಕೂಡ ಅಗತ್ಯ ಕ್ರಮಗಳನ್ನ ತೆಗೆದುಕೊಂಡಿದೆ. ಜನರು ಸಹ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡಬೇಕು. ‌ಕೊರೋನಾ ಅಂದರೆ ಭಯಬೇಡ, ಅಗತ್ಯವಾದ ಸುರಕ್ಷತಾ ಕ್ರಮಗಳನ್ನ ನಾವು ಪಾಲನೆ ಮಾಡೋಣ ಎಂದರು.

 

_____

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!