May 19, 2021

ನೋ ಮಾಸ್ಕ್, ಸಾಮಾಜಿಕ ಅಂತರವಂತೂ ಇಲ್ಲವೇ ಇಲ್ಲಾ: ಕೋವಿಡ್ ನಿಯಮಾವಳಿ ಮರೆತ ಹಾವೇರಿ ಜಿಲ್ಲಾಧಿಕಾರಿಗಳು..!?

ಹಾವೇರಿ: ಜನ್ಮದಿನದ ಸಂಭ್ರಮದಲ್ಲಿದ್ದ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ಮಾಸ್ಕ್ ಧರಿಸಿದೇ, ಸಾಮಾಜಿಕ ಅಂತರ ಮರೆತು ತಮ್ಮ ಇಲಾಖೆಯ ಸಿಬ್ಬಂದಿಯೊಂದಿಗೆ ಶುಕ್ರವಾರ ಫೋಟೊಕ್ಕೆ ಫೋಸು ಕೊಟ್ಟಿರೋದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು , ಜಿಲ್ಲಾಧಿಕಾರಿಗಳ ಈ ನಡೆಗೆ ಸಾರ್ವಜನಿಕರಿಂದ ಟೀಕೆಗೆ ಗುರಿಯಾಗಿದೆ. ಕೊರೋನಾ ಎರಡನೇ ಅಲೆ ತೀವ್ರಗೊಳ್ಳುತ್ತಿರುವ ಈ ಹೊತ್ತಿನಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳೇ ಆದೇಶ ಹೊರಡಿಸಿ ಮನವಿ ಮಾಡುತ್ತಿದ್ದರು.

ಆದರೆ, ಶುಕ್ರವಾರ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರ ಜನ್ಮದಿನದ ನಿಮಿತ್ತ ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಶುಭ ಕೋರಲು ತೆರಳಿದ್ದಾರೆ. ಹತ್ತಾರು ಸಿಬ್ಬಂದಿ ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಶುಭ ಕೋರಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಾಸ್ಕ್ ಧರಿಸದೇ ಫೋಟೋ ತೆಗೆಸಿಕೊಂಡಿರೋದು ಟೀಕೆಗೆ ಗುರಿಯಾಗಿದೆ.

ಎಲ್ಲರಿಗೂ ಮಾದರಿಯಾಗಿದ್ದು, ನಿಯಮಗಳನ್ನು ಸ್ವತಃ ತಾವು ಪಾಲನೆ ಮಾಡಬೇಕಾದ ಅಧಿಕಾರಿಗಳ ಈ ರೀತಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುವಂತಾಗಿದೆ.

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!