May 19, 2021

ಕೋವಿಡ್ ಭಯ: IPL ಕ್ರಿಕೇಟ್ ಟೂರ್ನಿ ರದ್ದು ಮಾಡಿದ ಬಿಸಿಸಿಐ..!

ಮುಂಬೈ : ದೇಶದಲ್ಲಿ ಕೊರೋನಾ ಅರ್ಭಟ ಮುಂದುವರೆದಿದೆ. ಅದರಲ್ಲೂ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದೆ. ಇನ್ನೊಂದಡೆ ಐಪಿಎಲ್ ಆಟಗಾರರು ಕೂಡ ಕೊರೋನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಐಪಿಎಲ್ ಪಂದ್ಯಾವಳಿಯನ್ನು ಸಂಪೂರ್ಣವಾಗಿ ರದ್ದು ಮಾಡಿದೆ.

ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಐಪಿಎಲ್ ಆಯೋಜನೆಯನ್ನು ಮಾಡಲಾಗಿತ್ತು. ಆದರೂ ಕೂಡ ಕ್ರಿಕೆಟ್ ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿಯಲ್ಲೀಗ ಬಿಸಿಸಿಐ ರದ್ದು ಮಾಡುವ ನಿರ್ಧಾರವನ್ನು ಕೈಗೊಂಡಿದೆ.

ಕೊಲ್ಕತ್ತಾ ತಂಡದ ಆಟಗಾರರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ನಿನ್ನೆಯ ಪಂದ್ಯವನ್ನು ಮುಂದೂಡಿಕೆ ಮಾಡಲಾಗಿತ್ತು. ಅಲ್ಲದೇ ಇನ್ನಷ್ಟು ಆಟಗಾರರಿಗೆ ಕೊರೋನಾ ಸೋಂಕು ಕಾಣಿಸಿ ಕೊಳ್ಳುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರವನ್ನು ಕೈಗೊಂಡಿದೆ.

ದೇಶದಾದ್ಯಂತ ಬಹುತೇಕ ರಾಜ್ಯಗಳಲ್ಲಿ ಲಾಕ್ ಡೌನ್ ಹೇರಿಕೆ ಮಾಡಿದ್ರೂ ಕೂಡ ಐಪಿಎಲ್ ಪಂದ್ಯ ನಡೆಯುತ್ತಿತ್ತು. ಇದೀಗ ಐಪಿಎಲ್ ಪಂದ್ಯಾವಳಿಯ ಮೇಲೆಯೂ ಕೊರೋನಾ ಎಫೆಕ್ಟ್ ತಟ್ಟಿದೆ. ಕೊರೋನಾ ಅರ್ಭಟ ಕ್ರಿಕೆಟ್ ಆಟಗಾರರು ಸಹ ತತ್ತರಿಸಿ ಹೋಗಿದ್ದಾರೆ. ಸೋಂಕು ಹೆಚ್ಚಳ ಆಗಬಹುದು ಅನ್ನೋ ಉದ್ದೇಶದಿಂದ ರದ್ದು ಮಾಡಲಾಗಿದೆ ಎಂದು ಬಿಸಿಸಿಐ ಹೇಳಿದೆ

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!