May 19, 2021

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ: ಸಂಪೂರ್ಣ ಲಾಕ್ ಡೌನ್ ಗೆ ಸಿದ್ದತೆಯೇ..!?

ಬೆಂಗಳೂರು- ಕೊರೋನಾ ಎರಡನೇ ಅಲೆ ಅರ್ಭಟಕ್ಕೆ 24 ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪರೀಕ್ಷಾ ದಿನಾಂಕಗಳನ್ನ ಪರೀಕ್ಷೆಗಳು ಆರಂಭವಾಗುವುದಕ್ಕೆ 20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.

ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸುರೇಶ ಕುಮಾರ್ ಹೇಳಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್ ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯ ಯೂ-ಟ್ಯೂಬ್ ಚಾನಲ್ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್ ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಅವರು ಮಾಹಿತಿ ನೀಡಿದರು.

ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು.ಅದರೆ ಕೊರೋನಾ ದಿನದಿಂದ ದಿನಕ್ಕೆ ಪ್ರಕರಣ ಹೆಚ್ಚಾಗುತ್ತಿವೆ. ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆಯನ್ನ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ ಹೇಳಿದ್ದಾರೆ.

Share this News
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ-- 7676063433
error: Content is protected !!