June 13, 2021

ಕೊರೋನಾ ಸೋಂಕಿತೆಗೆ ಆರೋಗ್ಯಯುತವಾಗಿ ಹೆರಿಗೆ ಮಾಡಿಸಿದ ಬ್ಯಾಡಗಿ ತಾಲೂಕು ಆಸ್ಪತ್ರೆಯ ವೈದ್ಯರು..!

ಹಾವೇರಿ – ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಅಬ್ಬರ ದಿನದಿಂದ ದಿನಕ್ಕೆ ರಣಕೇಕೆ ಹಾಕುತ್ತಿದೆ. ಕೊರೋನಾಕ್ಕೆ ಮಹಿಳೆಯರು ಮಕ್ಕಳು ಸೇರಿದಂತೆ ಎಲ್ಲರೂ ಸೋಂಕಿತರಾಗುತ್ತಿದ್ದಾರೆ. ಇದರ ನಡುವೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನಲ್ಲಿ 26 ವರ್ಷದ ಸೋಂಕಿತ ಗರ್ಭಿಣಿ ಮಹಿಳೆಗೆ ಹೆರಿಗೆಯಾಗಿದ್ದು, ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ..

ಗರ್ಭಿಣಿ ಮಹಿಳೆ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಹರಿಗೆ ನೋವು ಕಾಣಿಸಿಕೊಂಡಿತ್ತು. ಕೊವೀಡ್ ಕೇರ್ ಸೆಂಟರ್ ನಲ್ಲಿ ಕೆಲಸ ಮಾಡುವ ಬ್ಯಾಡಗಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಡಾಕ್ಟರ್ ನಾಗರಾಜ್ ನೇತೃತ್ವದಲ್ಲಿ ಮಾಲಾ, ವಾಣಿ, ಉಮಾ ಶುಶ್ರೂಷಕಿಯರ ಸಹಯೋಗದೊಂದಿಗೆ ನಾರ್ಮಲ್ ಡೆಲಿವರಿ ಮಾಡಿಸಿದ್ದು ತಾಯಿ ಮತ್ತು ಮಗು ಇಬ್ಬರೂ ಆರೋಗ್ಯದಿಂದ ಇದ್ದಾರೆ.

ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು‌ ಕೊವೀಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾರ್ಮಲ್ ಡೆಲಿವರಿ ಮಾಡಿಸಿದ್ದ ಬ್ಯಾಡಗಿ ತಾಲ್ಲೂಕು ಆಸ್ಪತ್ರೆಯ ವೈದ್ಯರಿಗೆ ಜಿಲ್ಲೆಯ ಜನರು ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ತಾಯಿ ಮತ್ತು ಮಗು ಕೊರೋನಾನಿಂದ ಗೆದ್ದು ಬೇಗ ಗುಣಮುಖರಾಗಲಿ ಎಂದು ಜನರು ಹಾರೈಸಿದ್ದಾರೆ.

Share this News
error: Content is protected !!