June 22, 2021

ಕೊಪ್ಪಳದ ಗವಿಸಿದ್ದೇಶ್ವರ ಮಠದ ವಸತಿ ನಿಲಯ ಆಯ್ತು, 100 ಹಾಸಿಗೆಯ ಕೋವಿಡ್ ಆಸ್ಪತ್ರೆ: ಅಭಿನವ ಶ್ರೀ ಗವಿಸಿಧ್ದೇಶ್ವರ ಶ್ರೀಗಳ ಕಾರ್ಯಕ್ಕೆ ಜನ‌ ಮೆಚ್ಚುಗೆ..!

ಕೊಪ್ಪಳ – ಕೊರೋನಾ ಎರಡನೇ ಅಲೆ ದೇಶ ಹಾಗೂ ರಾಜ್ಯ ಸಂಪೂರ್ಣ ತತ್ತರಿಸಿ ಹೋಗಿದೆ. ಸೋಂಕಿತರ‌ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಕೋವಿಡ್ ನ ಎರಡನೇ ಅಲೆಯ ಸಂಕಷ್ಟದ ಸಂದರ್ಭದಲ್ಲಿ ಕೊಪ್ಪಳದ ಗವಿಶ್ರೀ ಮಠದಲ್ಲಿ 100 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ನ್ನು ತೆರೆಯಲು ಮಠದ ಶ್ರೀಗಳಾದ ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಅವರಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ
ವಿನಂತಿ ಮಾಡಿಕೊಂಡರು.

ಮನವಿಗೆ ಸ್ಪಂದಿಸಿದ ಪೂಜ್ಯರು ಮಠದ ವಸತಿ ನಿಲಯವನ್ನು 100 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಆಗಿ ಮಾರ್ಪಡಿಸಿ, ಸಂಪೂರ್ಣವಾಗಿ ಕೋವಿಡ್ ರೋಗಿಗಳಿಗೆ ಮೀಸಲಿಟ್ಟು ಅಗತ್ಯ ಸೌಲಭ್ಯಗಳನ್ನು ಒದಗಿಸುವುದರ ಜತೆಗೆ ಮಠದ ವೈದ್ಯಕೀಯ ಕಾಲೇಜಿನ ಡಾಕ್ಟರ್ ಗಳು ಹಾಗೂ ಸಿಬ್ಬಂದಿ ವರ್ಗದವರನ್ನು ನೀಡುವುದಾಗಿ ತಿಳಿಸಿದ್ದಾರೆ.

ಸಮಾಜದ ಸೇವೆಗೆ ಸದಾ ಮುಂದಿರುವ ಪೂಜ್ಯರು ಇಂತಹ ಇಕ್ಕಟ್ಟಿನ ಸ್ಥಿತಿಯಲ್ಲಿ ನಮ್ಮ ಜೊತೆ ಕೈಜೋಡಿಸಿರುವುದಕ್ಕೆ ಅನಂತಾನಂತ ಧನ್ಯವಾದಗಳನ್ನ ತಿಳಿಸುತ್ತೇನೆ ಎಂದು ಕೃಷಿ ಸಚಿವ ಹಾಗೂ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.

ಒಟ್ಟಾರೆ ಕೊರೋನಾ ಅರ್ಭಟದ ನಡುವೆ ಮಠಮಾನ್ಯಗಳು ಸಹ ಉತ್ತಮ ಕಾರ್ಯ ಕೈಜೋಡಿಸುತ್ತಿವೆ. ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳ ಕಾರ್ಯ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗಿದೆ.

Share this News
error: Content is protected !!