June 18, 2021

ನಾಳೆ ಉನ್ನತ ಮಟ್ಟದ ಸಭೆ: ಸಂಪೂರ್ಣ ಲಾಕ್ ಡೌನ್ ಅನಿವಾರ್ಯ ಎಂದ ಸಿಎಂ..!

ಬೆಂಗಳೂರು- ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಂಪೂರ್ಣ ಲಾಕ್‌ಡೌನ್‌ನಂತಹ ಬಿಗಿಕ್ರಮ ಅನಿವಾರ್ಯ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಜನತಾ ಕರ್ಫ್ಯೂವನ್ನು ಜನ ಸರಿಯಾಗಿ ಪಾಲಿಸುತ್ತಿಲ್ಲ. ಸೋಂಕು ದಿನದಿಂದ ದಿನಕ್ಕೆ ಏರುತ್ತಿದೆ. ಸೋಂಕು ತಡೆಗೆ ಬಿಗಿಕ್ರಮ ಕೈಗೊಳ್ಳಲೇಬೇಕಿದೆ. ಸಂಪೂರ್ಣ ಲಾಕ್‌ಡೌನ್ ಅನಿವಾರ್ಯ ಎನಿಸಿದೆ.

ನಾಳೆ ನಡೆಯುವ ಉನ್ನತ ಮಟ್ಟದ ಸಭೆ ನಡೆಸಿ ಸಂಪೂರ್ಣ ಲಾಕ್‌ಡೌನ್ ಜಾರಿ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕೆ ಬಿಗಿಕ್ರಮ ಅನಿವಾರ್ಯವಾಗಲಿದೆ ಎಂದರು.

೧೪ ದಿನಗಳ ಜನತಾಕರ್ಫ್ಯೂ ಜಾರಿ ಮಾಡಿದ್ದರೂ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ಜನತೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಸೋಂಕು ನಿಯಂತ್ರಣಕ್ಕೆ ಬರದಿದ್ದರೆ ಸಂಪೂರ್ಣ ಲಾಕ್‌ಡೌನ್ ಜಾರಿ ಅನಿವಾರ್ಯವಾಗಲಿದೆ ಎಂದರು.

ಇಂದು ಮತ್ತು ನಾಳೆ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿ ಲಾಕ್‌ಡೌನ್‌ನ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.

Share this News
error: Content is protected !!