June 13, 2021

ವ್ಯಕ್ತಿ ಸಾವು.. ಸಂಬಂಧಿಕರಿಂದ ಹಾವೇರಿ ಜಿಲ್ಲಾಸ್ಪತ್ರೆ ವಿರುದ್ದ ಆಕ್ರೋಶ..!

ಹಾವೇರಿ- ಸೂಕ್ತ ಚಿಕಿತ್ಸೆ ಸಿಗದೆ ಕಿಡ್ನಿ ಸಮಸ್ಯೆಯಿಂದ ಬಳಲ್ತಿದ್ದ ವ್ಯಕ್ತಿ ಸಾವನ್ನಪ್ಪದು, ಜಿಲ್ಲಾಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹಾವೇರಿ‌ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದಿದೆ.

ಹಾವೇರಿ ನಗರದ ಐವತ್ತು ವರ್ಷದ ವ್ಯಕ್ತಿ ಉಸಿರಾಟದ‌ ಸಮಸ್ಯೆ ಅಂತಾ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ. ಕೊರೊನಾ ಟೆಸ್ಟ್ ರಿಪೋರ್ಟ್ ನೆಗಟಿವ್ ಬಂದಿದ್ದು, ಕಿಡ್ನಿಯಲ್ಲಿ ನೀರು ತುಂಬಿಕೊಂಡಿದ್ದರಿಂದ ದಾವಣಗೆರೆ ಆಸ್ಪತ್ರೆಗೆ ಜಿಲ್ಲಾಸ್ಪತ್ರೆ ಸಿಬ್ಬಂದಿ ರೆಪರ್ ಮಾಡಿದ್ದರು.

ನಿನ್ನೆ ಬೆಳಿಗ್ಗೆ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ದಾವಣಗೆರೆಗೆ ರೆಫರ್ ಮಾಡಿದ್ದರು. ದಾವಣಗೆರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ವಾಪಸ್ ಹಾವೇರಿ ಜಿಲ್ಲಾಸ್ಪತ್ರೆಗೆ ಬರುವ ವೇಳೆಯಲ್ಲಿ ಮಾರ್ಗಮಧ್ಯೆದಲ್ಲಿ 50 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ.

ವ್ಯಕ್ತಿ‌ ಮೃತಪಟ್ಟಿದ್ರಿಂದ ಜಿಲ್ಲಾಸ್ಪತ್ರೆಗೆ ಮೃತದೇಹ ತಂದು ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಕೆಲಕಾಲ ಆಕ್ರೋಶ ವ್ಯಕ್ತಪಡಿಸಿದರು

Share this News
error: Content is protected !!