June 18, 2021

ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತನೆಯಾದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನೆ..!

ಹಾವೇರಿ – ಉಸಿರಾಟದ ಸಮಸ್ಯೆಯಿಂದ ಬಳಲುವ ಕೋವಿಡ್ ಸೋಂಕಿತರ ಪ್ರಾಣ ಕಾಪಾಡುವ 25 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಗೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ಹಸ್ತಾಂತರಿಸಿದರು.

ಇದರ ಜತೆ ಶಿಗ್ಗಾವಿಯಲ್ಲಿ‌ ಇರುವ ತಮ್ಮ‌ಮನೆಯ ಆವರಣದಲ್ಲಿ ಕೋವಿಡ್ ಆರೈಕೆ ಕೇಂದ್ರ ಸ್ಥಾಪಿಸಿ 50 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ.

ಗುರುವಾರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ಸ್ಥಿತಿಗತಿ ಮತ್ತು ತಾಲೂಕು ಆಸ್ಪತ್ರೆಯಲ್ಲಿ ಮಾಡಲಾದ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅವರು ಆಕ್ಸಿಜನ್ ಕನ್ಸೆಂಟ್ರೇಟರ್ ಗಳನ್ನು ಶಿಗ್ಗಾಂವಿ ತಾಲೂಕು ವೈದ್ಯಾಧಿಕಾರಿಗಳಿಗೆ ಸಾಂಕೇತಿಕವಾಗಿ ಹಸ್ತಾಂತರಿಸಿದರು.

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಡ್ ಗಳನ್ನು ಸಿದ್ದಪಡಿಸಬೇಕಾಗಿದೆ. ಆದ್ದರಿಂದ ಶಿಗ್ಗಾವಿ ತಾಲೂಕು ಆಸ್ಪತ್ರೆಯಲ್ಲಿ ತಕ್ಷಣ 46 ಹೆಚ್ಚುವರಿ ಬೆಡ್ ಗಳನ್ನು ಸಿದ್ಧಪಡಿಸುವಂತೆ ಬಸವರಾಜ್ ಬೊಮ್ಮಾಯಿ ಸೂಚಿಸಿದರು. ಇನ್ನೂ ಈ ಸಂಧರ್ಭದಲ್ಲಿ ವೈದ್ಯಾಧಿಕಾರಿಗಳಾದ ವಿವೇಕ ಜೈಂಕೇರಿ, ಉದಯ, ಲಕ್ಷ್ಮಣ ನಾಯ್ಕ್, ಮಹೇಶ ಇದ್ದರು.

Share this News
error: Content is protected !!