June 22, 2021

ಕ್ಷೇತ್ರದಲ್ಲಿ ಕೊರೋನಾದಿಂದ ಮೃತಪಟ್ಟವರಿಗೆ 50ಸಾವಿರ ರೂಪಾಯಿಗಳ ವ್ಯಯಕ್ತಿಕ ಪರಿಹಾರ ಘೋಷಿಸಿದ ಬಿ.ಸಿ. ಪಾಟೀಲ..!..

ಹಿರೇಕೆರೂರು- ಹಾವೇರಿ ಜಿಲ್ಲೆಯ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲ್ಲೂಕಿನಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ವೈಯಕ್ತಿಕವಾಗಿ 50 ಸಾವಿರ ರೂಪಾಯಿಗಳ ಪರಿಹಾರ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ ಘೋಷಣೆ ಮಾಡಿದ್ದಾರೆ.

ಹಿರೇಕೆರೂರು ಕ್ಷೇತ್ರದಲ್ಲಿ ಎರಡನೇಯ ಅಲೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.

ನಾಳೆಯಿಂದ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲ್ಲೂಕಿನಲ್ಲಿ ಮೃತರ ಮನೆಗಳಿಗೆ ತೆರಳಿ ಪರಿಹಾರದ ಹಣ ವಿತರಣೆ ಮಾಡಲಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ 18 ಜನರು ಮೃತಪಟ್ಟಿದ್ದಾರೆ. ಕೊರೊನಾದಿಂದ ಮೃತಪಟ್ಟವರ ಮನೆಗಳಿಗೆ ಸ್ವತಃ ತಾವೇ ತೆರಳಿ 50 ಸಾವಿರ ರೂಪಾಯಿಗಳ ಪರಿಹಾರವನ್ನು ವಿತರಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸೋಂಕಿತರಾಗಿ ಹೋಂ ಐಸೋಲೇಶನ್ ನಲ್ಲಿ ಇರುವವರು ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲಾಗಿ, ಕುಟುಂಬ ವರ್ಗದವರಿಗೆ ಸೋಂಕು ತಗುಲದಂತೆ ಎಚ್ಚರಿಕೆ ವಹಿಸುವಂತೆ ಜನರಲ್ಲಿ ಕೃಷಿ ಬಿ.ಸಿ.ಪಾಟೀಲ‌ ಮನವಿ ಮಾಡಿದ್ದಾರೆ.

_____

Share this News
error: Content is protected !!