June 13, 2021

ದಂಡಂ ದಶಗುಣಂ| ಲಾಕ್ಡೌನ್ ಇದ್ರೂ ಅನಾವಶ್ಯಕ ತಿರುಗಾಟ. ಗಾಡಿಗೆ ಪೈನು, ಬಾಡಿಗೆ ಲಾಠಿ ಏಟು..!

ರಾಣೇಬೆನ್ನೂರು- ಕೊರೋನಾ ಅರ್ಭಟ ರಾಜ್ಯದಲ್ಲಿ ಮುಂದುವರೆದಿದೆ. ಇಂದಿನಿಂದ ಹಾವೇರಿ ಜಿಲ್ಲೆಯಲ್ಲಿ ಐದು ದಿನಗಳ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಅದರೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದಲ್ಲಿ ಸಾರ್ವಜನಕರು ಅನಗತ್ಯವಾಗಿ ತಿರುಗಾಡುತ್ತಿದ್ದಾರೆ. ಅನಗತ್ಯವಾಗಿ ಓಡಾಡುತ್ತಿರುವ ಜನರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಲಾಕ್ ಡೌನ್ ಇದ್ದರೂ ಅನಗತ್ಯವಾಗಿ ಓಡಾಡುತ್ತಿರುವ ಪುಂಡರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ. ಇನ್ನು ಅನಗತ್ಯವಾಗಿ ಓಡಾಡುವ ಬೈಕ್ ಸವಾರರಿಗೆ ದಂಡ ಹಾಕಿ ಕಳಿಸುತ್ತಿದ್ದಾರೆ.

ಲಾಕ್ ಡೌನ್ ಆದೇಶಕ್ಕೆ ಡೋಂಟ್ ಕೇರ್ ಎನ್ನದೆ ರಾಣೆಬೆನ್ನೂರು ನಗರದಲ್ಲಿ ಬೇಕಾಬಿಟ್ಟಿ ಓಡಾಡುತ್ತಿರುವ ಜನರ ಸಂಖ್ಯೆ ಹೆಚ್ಚಾಗಿದೆ.

 

______

Share this News
error: Content is protected !!