June 13, 2021

ಹಿರೇಕೆರೂರಿನಲ್ಲಿ ಎರಡು ಬ್ಲ್ಯಾಕ್ ಫಂಗಸ್ ಪತ್ತೆ..!

ಹಾವೇರಿ- ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಮಧ್ಯೆ ಬ್ಲ್ಯಾಕ್ ಫಂಗಸ್ ಆತಂಕ ಶುರುವಾಗಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು, ಹಿರೇಕೆರೂರಿನಲ್ಲಿ ಎರಡು ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ.

ಬ್ಲ್ಯಾಕ್ ಫಂಗಸ್ ಪತ್ತೆಯಾದ ಹಿನ್ನೆಯಲ್ಲಿ ಕ್ಷೇತ್ರದ ಜನರು ಕೋವಿಡ್‌ನಿಂದ ಸುರಕ್ಷಿತವಾಗಿರಲು ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಹಿರೇಕೆರೂರು ಮತಕ್ಷೇತ್ರದ ಶಾಸಕರಾಗಿರುವ ಕೃಷಿ ಸಚಿವ ಬಿ‌.ಸಿ.ಪಾಟೀಲ್ ಮನವಿ ಮಾಡಿದ್ದಾರೆ.

ಜನರು ಕೋವಿಡ್‌ನಿಂದ ಜಾಗೃತವಾಗಿರಬೇಕೇ ಹೊರತು ಆತಂಕಕ್ಕೊಳಗಾಗಬಾರದು. ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ವೈದ್ಯರ ಮಾರ್ಗದರ್ಶನ ಪಡೆಯಬೇಕು. ಅಗತ್ಯಬಿದ್ದಲ್ಲಿ ವೈದ್ಯರು ಸೂಚಿಸಿದರೆ ಕೋವಿಡ್ ಕೇರ್ ಸೆಂಟರ್ ‌ಗೆ ದಾಖಲಾಗಬೇಕು ಎಂದು ಮನವಿ ಮಾಡಿದರು.

Share this News
error: Content is protected !!