June 13, 2021

ಸಿಎಂ ಪುತ್ರನಿಗೆ ಬೇರೆ ಕಾನೂನಿದೆಯೇ..? ವಿಜಯೇಂದ್ರ ವಿರುದ್ಧ ಎಎಪಿ ನಾಯಕಿ ಮಾಲವಿಕಾ ಗರಂ..!

ಮೈಸೂರು: ಲಾಕ್‌ಡೌನ್‌ ನಿಯಮವನ್ನು ಉಲ್ಲಂಘಿಸಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಪುತ್ರ ಬಿ.ವೈ. ವಿಜಯೇಂದ್ರರವರನ್ನು ಮೈಸೂರಿನ ಆಮ್‌ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷೆ ಮಾಲವಿಕಾ ಗುಬ್ಬಿವಾಣೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮಾಲವಿಕಾ, “ಸಿಎಂ ಪುತ್ರ ಬಿ.ವೈ.ವಿಜಯೇಂದ್ರರವರು ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನ ಪ್ರವೇಶಿಸಿ ಐದು ದಿನವಾಯಿತು. ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದರೂ ಪೊಲೀಸರು ಕ್ರಮಕೈಗೊಂಡಿಲ್ಲ. ರಾಜ್ಯದಲ್ಲಿ ಸಾಮಾನ್ಯ ಜನರಿಗೆ ಒಂದು ಕಾನೂನು, ಸಿಎಂ ಪುತ್ರನಿಗೆ ಬೇರೆ ಕಾನೂನು ಇದೆಯೇ?” ಎಂದು ಪ್ರಶ್ನಿಸಿದ್ದಾರೆ.

ಮಾ. 18ರಂದು ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಪತ್ನಿ ಹಾಗೂ ಆಪ್ತರೊಂದಿಗೆ ಭೇಟಿ ನೀಡಿದ್ದ ವಿಜಯೇಂದ್ರ ವಿಶೇಷ ಪೂಜೆ ಸಲ್ಲಿಸಿದ್ದರು. ಲಾಕ್‌ಡೌನ್‌ ಇರುವುದರಿಂದ ಕೇವಲ ಅರ್ಚಕರಿಗಷ್ಟೇ ದೇವಸ್ಥಾನದೊಳಗೆ ಪ್ರವೇಶವಿದ್ದು, ಭಕ್ತರ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧವಿದೆ. ಆದರೂ ಇವರು ಆಪ್ತರೊಂದಿಗೆ ಭೇಟಿ ನೀಡಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ಸಂಬಂಧ ಬೇಸರ ವ್ಯಕ್ತಪಡಿಸಿದ್ದ ಹೈಕೋರ್ಟ್‌, ಇನ್ನೂ ಏಕೆ ಎಫ್‌ಐಆರ್‌ ದಾಖಲಿಸಿಲ್ಲವೆಂದು ಪೊಲೀಸ್‌ ಇಲಾಖೆಯನ್ನು ಪ್ರಶ್ನಿಸಿತ್ತು.

Share this News
error: Content is protected !!