June 18, 2021

HAVERI| ಮೇ 25 ರಿಂದ ಜೂನ್ 7ರವರೆಗೆ ಲಾಕ್ಡೌನ್ ವಿಸ್ತರಣೆ: ವಾರದಲ್ಲಿ ಮೂರು ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ.

ಹಾವೇರಿ – ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣದ ನಿಟ್ಟಿನಲ್ಲಿ ಮೇ 25ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 7ರ ಬೆಳಿಗ್ಗೆ 6 ಗಂಟೆವರೆಗೆ ವರೆಗೆ ಜಿಲ್ಲೆಯಾದ್ಯಂತ ಲಾಕ್ ಡೌನ್ ಮುಂದುವರಿಸಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.

ವಾರದಲ್ಲಿ ಮೂರು ದಿನ ಮಂಗಳವಾರ, ಗುರುವಾರ ಹಾಗೂ ಶನಿವಾರ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಕೋವಿಡ್ ಮಾರ್ಗಸೂಚಿಯನ್ವಯ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಸಾರ್ವಜನಿಕರಿಗೆ ತರಕಾರಿ, ಔಷಧಿ, ದಿನಸಿ ಸಾಮಗ್ರಿಗಳನ್ನು ತಾವು ವಾಸಿಸುವ ಸ್ಥಳದಲ್ಲಿ ಹತ್ತಿರದ ಅಂಗಡಿಗಳಿಂದ ಖರೀದಿಸಲು ಮಾತ್ರ ವಿನಾಯಿತಿ ನೀಡಲಾಗಿದೆ.

ಅಗತ್ಯ ವಸ್ತುಗಳಾದ ಹಾಲು, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಮತ್ತು ಪಡಿತರ ಆಹಾರ ಧಾನ್ಯಗಳು, ಗ್ರಹ ಬಳಕೆ ಎಲ್.ಪಿ.ಜಿ.ಸಿಲಿಂಡರ್ ಸಾಗಾಣಿಕೆ ಮತ್ತು ವಿತರಣೆ ಹಾಗೂ ಅಗತ್ಯ ಸೇವೆಗಳಾದ ಅಂಬುಲನ್ಸ್, ಅಗ್ನಿ ಶಾಮಕ, ಪೆಟ್ರೋಲ್ ಪಂಪ್, ಆಮ್ಲಜನಕ ಉತ್ಪಾದನಾ ಘಟಕ, ಎ.ಟಿ.ಎಂ, ಬ್ಯಾಂಕ್, ಪೊಸ್ಟ್ ಆಫಿಸ್, ವಿಮಾ, ಟೆಲಿಕಾಂ, ಇಂಟರ್ ನೆಟ್ ಹಾಗೂ ಖಾಸಗಿ ಭದ್ರತಾ ಸೇವೆಗಳಲ್ಲಿ ತೊಡಗಿರುವ ಸಿಬ್ಬಂದಿಗಳು ಲಾಕ್‍ಡೌನ್‍ನಿಂದ ವಿನಾಯಿತಿ ನೀಡಿ ಅನುಮತಿ ನೀಡಲಾಗಿದೆ.

ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಪರಿಕರಗಳು, ಯಂತ್ರೋಪಕರಣಗಳು, ಬೀಜ ಮತ್ತು ರಸಗೊಬ್ಬರ ಮಾರಾಟಕ್ಕೆ ಬೆಳಿಗ್ಗೆ, 6-00 ಗಂಟೆಯಿಂದ 10-00 ಗಂಟೆಯವರೆಗೆ ವಿನಾಯಿತಿ ನೀಡಿದೆ. ಕಟ್ಟಡ ನಿರ್ಮಾಣ ಕಾಮಗಾರಿಗಳ ಸ್ಥಳದಲ್ಲಿಯೇ ವಾಸವಿದ್ದ ಕಟ್ಟಡ ಕೆಲಸಗಾರರಿಂದ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಅನುಮತಿ ಇದೆ. ಅಂತ್ಯ ಸಂಸ್ಕಾರಕ್ಕೆ 05 ಜನಕ್ಕೆ ಮೀರದಂತೆ ಅನುಮತಿ ನೀಡಲಾಗಿದೆ. ಈ ಆದೇಶವು ಕೋವಿಡ್-19 ಕಾರ್ಯನಿರತ ಸಿಬ್ಬಂದಿಗಳು ಮತ್ತು ಸರ್ಕಾರಿ ವಾಹನಗಳ ಓಡಾಟಕ್ಕೆ ಅನ್ವಯಿಸುವುದಿಲ್ಲ.

ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ಜಿಲ್ಲೆಯಾದ್ಯಂತ ವಿನಾಯಿತಿ ಪಡೆದ ಉದ್ದೇಶಗಳನ್ನು ಹೊರತುಪಡಿ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಜನರಿಗೂ ಅಧಿಕ ವ್ಯಕ್ತಿಗಳು ಒಂದೇಡೆ ಸೇರುವಿಕೆಯನ್ನು ನಿಷೇಧಿಸಲಾಗಿದೆ.

Share this News
error: Content is protected !!