June 22, 2021

ಸ್ವಾತಂತ್ಯ್ರ ಹೋರಾಟಗಾರ, ಶತಾಯುಷಿ ಹೆಚ್‌.ಎಸ್‌. ದೊರೆಸ್ವಾಮಿ ಇನ್ನಿಲ್ಲ..!

ಬೆಂಗಳೂರು – ನಮ್ಮ ನಾಡು ಕಂಡ ಹಿರಿಯ ಸ್ವಾತಂತ್ಯ್ರ ಹೋರಾಟಗಾರ ಹೆಚ್‌.ಎಸ್‌. ದೊರೆಸ್ವಾಮಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 104 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ತಾನೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರು ಚೇತರಿಸಿಕೊಂಡಿದ್ದರು. ಅದರ ನಂತರ ಉಸಿರಾಟದ ತೊಂದರೆಯಿಂದಾಗಿ ಚಿಕಿತ್ಸೆಗೆ ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಹಿರಿಯ ಚೇತನದ ಅಗಲಿಕೆಗೆ ರಾಜಕೀಯ ನಾಯಕರು ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ. ಕೊರೊನಾ ಕಾರಣಕ್ಕೆ ಅಂತಿಮ ದರ್ಶನವನ್ನು ಪಡೆಯಲು ಸಾಧ್ಯವಾಗದೆ ಆನ್‌ಲೈನ್‌ ಮೂಲಕ ನಡೆಯುತ್ತಿದೆ. ಅಂತಿಮ ಸಂಸ್ಕಾರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲೂ ಸಿದ್ದತೆ ಮಾಡಲಾಗುತ್ತಿದೆ.


ಮುಖ್ಯಮಂತ್ರಿ ಯಡಿಯೂರಪ್ಪ, “ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ” ಎಂದು ಹೇಳಿದ್ದಾರೆ.

ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ, “ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಶ್ರೀ ಎಚ್. ಎಸ್. ದೊರೈಸ್ವಾಮಿ ಅವರು ನಿಧನರಾದ ಸುದ್ದಿ ತುಂಬಾ ದುಃಖದ ವಿಷಯ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

Share this News
error: Content is protected !!