June 13, 2021

ಆರ್ಯುವೇದಿಕ್ ಮೆಡಿಕಲ್ ಕಾಲೇಜ್ ನಲ್ಲಿ 80 ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಸಿದ್ಧತೆ.

ಹಾವೇರಿ: ಹಾವೇರಿ ನಗರದ ಸಿಂದಗಿ ಶಾಂತವೀರೇಶ್ವರ ಆರ್ಯುವೇದಿಕ್ ಮೆಡಿಕಲ್ ಕಾಲೇಜ್‍ನ್ನು ನೂತನ ಕೋವಿಡ್ ಕೇರ್ ಸೆಂಟರ್ ಆಗಿ ಗುರುತಿಸಲಾಗಿದೆ. 80 ಹಾಸಿಗೆಗಳ ವ್ಯವಸ್ಥೆಮಾಡಿ ಕೋವಿಡ್ ಸೋಂಕಿತರ ದಾಖಲಾತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ತಿಳಿಸಿದ್ದಾರೆ.

ಹೆಚ್ಚುವರಿಯಾಗಿ ಹಾವೇರಿ ತಾಲೂಕಿನಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸುವ ಕುರಿತಂತೆ ಮಂಗಳವಾರ ನಗರದ ಸಿಂದಗಿ ಶಾಂತವೀರೇಶ್ವರ ಆರ್ಯುವೇದಿಕ್ ಮೆಡಿಕಲ್ ಕಾಲೇಜ್‍ಗೆ ಭೇಟಿ ನೀಡಿ ಕೋವಿಡ್ ಕೇರ್ ಸೆಂಟರ್‍ಗೆ ಅಗತ್ಯ ಸೌಲಭ್ಯಗಳ ಕುರಿತಂತೆ ಪರಿಶೀಲನೆ ನಡೆಸಿ ಕಾಲೇಜಿನ ಪ್ರಾಚಾರ್ಯರು ಹಾಗೂ ವೈದ್ಯರೊಂದಿಗೆ ಚರ್ಚಿಸಿದರು.

ಆಯುರ್ವೇದಿಕ್ ಕಾಲೇಜಿನಲ್ಲಿ 80 ಬೆಡ್‍ಗಳಿಗೆ ಅವಕಾಶ ಮಾಡಲಾಗುವುದು. ಬೆಡ್‍ಗಳ ವ್ಯವಸ್ಥೆ, ಇತರ ಸೌಲಭ್ಯಗಳನ್ನು ಹಾಗೂ ಅಗತ್ಯ ಮಾನವ ಸಂಪನ್ಮೂಲಗಳನ್ನು ಜಿಲ್ಲಾಡಳಿತದಿಂದ ಒದಗಿಸಲಾಗುವುದು. ನಗರದಲ್ಲಿ ಹೆಚ್ಚುವರಿಯಾಗಿ ಕೋವಿಡ್ ಕೇರ್ ಸೆಂಟರ್ ಆರಂಭಿಸುವುದರಿಂದ ಬಸಾಪುರ ಕೋವಿಡ್ ಕೇರ್ ಸೆಂಟರ್‍ಮೇಲಿನ ಒತ್ತಡ ಕಡಿಮೆಯಾಗಲಿದೆ. ಸ್ಥಳೀಯವಾಗಿ ಈ ಸೆಂಟರ್ ನಲ್ಲಿ ದಾಖಲಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ -19 ಎರಡನೇ ಅಲೆಯ ಅಲ್ಪ ಪ್ರಮಾಣದ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಹೋಂ ಐಸೋಲೇಷನ್ ಇರುತ್ತಿರುವುದರಿಂದ ಇವರಿಗೆ ಔಷಧೋಪಚಾರದೊಂದಿಗೆ ಮನೆಗಳಲ್ಲಿ ಸರಿಯಾದ ವ್ಯವಸ್ಥೆ ಇಲ್ಲದಿರುವುದರಿಂದ ಮನೆಯಲ್ಲಿರುವ ಇನ್ನಿತರರಿಗೂ ರೋಗವು ವ್ಯಾಪಕವಾಗಿ ಹರಡುತ್ತಿರುವುದು ಕಂಡುಬರುತ್ತಿದೆ. ಹಾಗಾಗಿ ಸೋಂಕಿತರನ್ನು ಹತ್ತಿರದ ಕೋವಿಡ್ ಕೇರ್ ಸೆಂಟರ್‍ಗಳಿಗೆ ದಾಖಲಿಸುವ ವ್ಯವಸ್ಥೆಗಾಗಿ ಈ ಕೇಂದ್ರವನ್ನು ಗುರುತಿಸಲಾಗಿದೆ ಎಂದರು.

Share this News
error: Content is protected !!