June 22, 2021

IPL ಗೆ ಮುಹೂರ್ತ ಫಿಕ್ಸ್: ಇನ್ನುಳಿದ 31 ಪಂದ್ಯಗಳಿಗೆ UAE ಆತಿಥ್ಯ.

ಮುಂಬೈ: ಬಹುನಿರೀಕ್ಷಿತ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಇನ್ನುಳಿದ ಪಂದ್ಯಗಳಿಗೆ ಯುಎಇ ಆತಿಥ್ಯ ವಹಿಸಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಸ್ಪಷ್ಟಪಡಿಸಿದ್ದಾರೆ.

ಶನಿವಾರ (ಮೇ 29) ವಿಶೇಷ ಸಾಮಾನ್ಯ ಸಭೆಯಲ್ಲಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ. ಈ ಹಿಂದೆ 15ನೇ ಆವೃತ್ತಿಯ ಸಂಪೂರ್ಣ ಐಪಿಎಲ್ ಟೂರ್ನಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಆತಿಥ್ಯ ವಹಿಸಿತ್ತು. ಭಾರತದಲ್ಲಿ ಸದ್ಯ ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಇನ್ನುಳಿದ 31 ಐಪಿಎಲ್ ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸಲು ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಿದೆ.

ಈ ಟೂರ್ನಿಯು ಇಂಗ್ಲೆಂಡ್, ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾದಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಬಿಸಿಸಿಐ ಈ ಎಲ್ಲಾ ಅನುಮಾನಗಳಿಗೆ ತೆರೆ ಎಳೆದಿದೆ.

ಭಾರತದಲ್ಲಿ ನಡೆಯಬೇಕಿರುವ 2020ರ ಟಿ20 ವಿಶ್ವಕಪ್ ಆಯೋಜನೆಯ ಕುರಿತಂತೆ ಬಿಸಿಸಿಐ, ಐಸಿಸಿಗೆ ಮತ್ತಷ್ಟು ಸಮಯಾವಕಾಶವನ್ನು ಕೇಳಿದೆ. ಭಾರತದಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಅಯೋಜಿಸಬೇಕೇ ಅಥವಾ ಬೇಡವೇ ಎನ್ನುವ ಕುರಿತಂತೆ ಐಸಿಸಿ ಜೂನ್ 1ರಂದು ಸಭೆ ಸೇರಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಿದೆ.

Share this News
error: Content is protected !!