June 18, 2021

ಜಿಲ್ಲಾಡಳಿತಕ್ಕೆ ಸಂಗೂರ ಸಕ್ಕರೆ ಕಾರ್ಖಾನೆಯಿಂದ ಒಂದು ಸಾವಿರ ಆಹಾರ ಸಾಮಗ್ರಿ ಕಿಟ್..

ಹಾವೇರಿ- ಸಂಗೂರಿನ ಜಿ.ಎಂ.ಸಿದ್ದೇಶ್ವರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಕೋವಿಡ್ ಸೋಂಕಿತ ಬಡ ಕುಟುಂಬಗಳಿಗೆ ವಿತರಿಸಲು ಜಿಲ್ಲಾಡಳಿತಕ್ಕೆ ಒಂದು ಸಾವಿರ ಆಹಾರ ಸಾಮಗ್ರಿಗಳ ಕಿಟ್‍ನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ಅವರಿಗೆ ಹಸ್ತಾಂತರಿಸಿದರು.

ಸಂಗೂರ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಅಮೀತ್ ಶರ್ಮಾ ಹಾಗೂ ಎಜಿಎಂ ರಾಮಚಂದ್ರ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಒಂದು ಸಾವಿರ ಫುಡ್ ಕಿಟ್‍ಗಳನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಿದರು. ಫುಡ್ ಕಿಟ್‍ನಲ್ಲಿ ಅಕ್ಕಿ, ಎಣ್ಣೆ, ಬೇಳೆ, ಮಸಾಲಾ ಪದಾರ್ಥಗಳನ್ನು ಒಳಗೊಂಡಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ಇತರರು ಉಪಸ್ಥಿತರಿದ್ದರು.

______

Share this News
error: Content is protected !!