June 18, 2021

ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ: ಎಣ್ಣೆ ಹಾಗೂ ಬೆಳೆಕಾಳು ಬೆಳೆಗಳ ಬಹುಬೆಳೆ ಯೋಜನೆಗೆ ಹಾವೇರಿ ಪೈಲೆಟ್ ಜಿಲ್ಲೆಯಾಗಿ ಆಯ್ಕೆ.!

ಹಾವೇರಿ, ಜೂ.2- ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪ್ರಧಾನಮಂತ್ರಿಗಳು ರೂಪಿಸಿರುವ ಎಣ್ಣೆ ಹಾಗೂ ಬೆಳೆಕಾಳು ಬೆಳೆಗಳ ಬಹುಬೆಳೆ ಯೋಜನೆಗೆ ಹಾವೇರಿ ಜಿಲ್ಲೆಯನ್ನು ಕರ್ನಾಟಕ ರಾಜ್ಯದಲ್ಲಿ ಪೈಲೆಟ್ ಜಿಲ್ಲೆಯಾಗಿ ಆಯ್ಕೆ ಮಾಡಲಾಗಿದೆ ಎಂದು ಎಂದು ಗೃಹ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಹಾಗೂ ಕೃಷಿ ಸಚಿವರಾದ ಬಿ.ಸಿ.ಪಾಟೀಲ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ವಿವಿಧ ಹುದ್ದೆಗಳಿಗೆ ಸರಕಾರ ಹೊರಡಿಸಿರುವ ನೇಮಕಾತಿ ಆದೇಶ ನೋಡಲು ಇಲ್ಲಿ click ಮಾಡಿ

ಬುಧವಾರ ಹಾವೇರಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಕಚೇರಿ ಆವರಣದಲ್ಲಿ ರೈತರಿಗೆ ಪೈಲೆಟ್ ಯೋಜನೆಯಡಿ ದ್ವಿದಳ ಧಾನ್ಯಗಳ ಬಿತ್ತನೆ ಬೀಜಗಳ ಕಿಟ್‌ಗಳನ್ನು ವಿತರಿಸಿ ಮಾಹಿತಿ ನೀಡಿದರು. ಬಹುಬೆಳೆ ಪದ್ಧತಿಯನ್ನು ಅನುಸರಿಸಿದರೆ ಒಂದಲ್ಲ ಒಂದು ಬೆಳೆ ರೈತನ ಕೈಹಿಡಿದು ನಿಶ್ಚಿತ ಆದಾಯದ ಜೊತೆಗೆ ರೈತರ ಆದಾಯ ದ್ವಿಗುಣಗೊಳ್ಳುತ್ತದೆ. ರೈತರ ಬದುಕು ಸುಧಾರಿಸುತ್ತದೆ ಎಂಬ ಆಶಯದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ. ವಿಶೇಷ ಕಾಳಜಿ ವಹಿಸಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ ಅವರು ಕರ್ನಾಟಕ ರಾಜ್ಯದಲ್ಲಿ ಹಾವೇರಿ ಜಿಲ್ಲೆಗೆ ಈ ಯೋಜನೆಯನ್ನು ಮುಂಜೂರು ಮಾಡಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗುತ್ತಿದೆ. ಈ ಬೆಳೆಯ ಅಂತರ ಬೆಳೆಯಾಗಿ ಅಥವಾ ಪ್ರತ್ಯೇಕ ಬೆಳೆಯಾಗಿ, ಸೋಯಾ, ತೊಗರಿ, ಶೇಂಗಾ, ಸೂರ್ಯಕಾಂತಿ ಎಣ್ಣೆ ಹಾಗೂ ದ್ವಿದಳ ಧಾನ್ಯಗಳನ್ನು ಬೆಳದರೆ ನಿಶ್ಚಿತವಾದ ಆದಾಯ ಬರಲಿದೆ. ಜಿಲ್ಲೆಯಲ್ಲಿ ೨೪೪೧ ಕ್ವಿಂಟಲ್ ದ್ವಿದಳ ಧಾನ್ಯ ಬೀಜಗಳು ಪೂರೈಕೆಯಾಗಿವೆ ಎಂದರು.

ಸಮಯ ಹೆಚ್ಚಳ: ಮುಂಗಾರು ಬಿತ್ತನೆ ಸಂದರ್ಭದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಖರೀದಿಗೆ ಲಾಕ್‌ಡೌನ್ ಅವಧಿಯಲ್ಲಿ ಸಮಯವನ್ನು ಹೆಚ್ಚಳಮಾಡುವ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ಸೂಕ್ತ ಕ್ರಮಕೈಗೊಳ್ಳಲು ತಿಳಿಸಿರುವುದಾಗಿ ಹೇಳಿದರು.

Share this News
error: Content is protected !!