June 13, 2021

ಲಾಕ್ ಡೌನ್ ವಿಸ್ತರಣೆ: ಜೂನ್ ನಾಲ್ಕರಂದು ಬೆಳಗಾವಿಯಲ್ಲಿ ತಜ್ಞರ ಸಮಿತಿ ಜೊತೆ ಸಿಎಮ್ ಸಭೆ.!

ಹಾವೇರಿ,ಜೂ.2: ಲಾಕ್ ಡೌನ್ ವಿಸ್ತರಣೆ ಬಗ್ಗೆ ಜೂನ್ ನಾಲ್ಕರಂದು ಸಿಎಂ ಬೆಳಗಾವಿಯಲ್ಲಿ ಸಭೆ ಮಾಡುತ್ತಿದ್ದಾರೆ. ಹಲವು ಜಿಲ್ಲೆಗಳಲ್ಲಿ ಕಡಿಮೆ ಆಗಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಕಡಿಮೆ ಆಗಬೇಕಿದೆ. ಎಲ್ಲವನ್ನೂ ಗಮನಿಸುತ್ತಿದ್ದೇವೆ. ಸಭೆಯ ಪೂರ್ವದಲ್ಲಿ ತಜ್ಞರ ವರದಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಸಿಎಂ ಅವರು ತೀರ್ಮಾನ ಮಾಡುತ್ತಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ, ನಂತರ ಮಾತನಾಡಿದ ಅವರು ಲಾಕ್ ಡೌನ್ ಯಾವ ರೀತಿ ಇರಬೇಕು, ಹೇಗೆ ಇರಬೇಕು ಎಂಬುದರ ಬಗ್ಗೆ ಜೂನ್ 5ರಂದು ಸಿಎಂ ತೀರ್ಮಾನ ಮಾಡುತ್ತಾರೆ. ಮೂರನೇ ಅಲೆ ಎದುರಿಸಲು ಈಗಾಗಲೆ ಸರಕಾರ ಸಜ್ಜಾಗುತ್ತಿದೆ. ಆಕ್ಸಿಜನ್ ಬೆಡ್ಗಳು, ವೆಂಟಿಲೇಟರ್, ಐಸಿಯು ಹೆಚ್ಚು ಮಾಡುತ್ತಿದ್ದೇವೆ. ಪ್ರತಿಯೊಂದು ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಮಾಡಬೇಕು ಅಂತಾ ನಿರ್ಧರಿಸಿ ಅದಕ್ಕೆ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದರು.

ವಿವಿಧ ಹುದ್ದೆಗಳಿಗೆ ಸರಕಾರ ಹೊರಡಿಸಿರುವ ನೇಮಕಾತಿ ಆದೇಶ ನೋಡಲು ಇಲ್ಲಿ click ಮಾಡಿ

ಇನ್ನು ಸಿಬಿಎಸ್ಸಿ, ಐಸಿಎಸ್ಸಿ ಪರೀಕ್ಷೆ ಮುಂದೆ ಹೋಗಿದೆ. ಅಲ್ಲಿಯ ವ್ಯವಸ್ಥೆಯಂತೆ ರಾಜ್ಯಮಟ್ಟದ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಇಲ್ಲ. ಮಕ್ಕಳ ಭವಿಷ್ಯದ ಬಗ್ಗೆ ಶಿಕ್ಷಣ ಸಚಿವ ಸುರೇಶಕುಮಾರ ಅವರು ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದಾರೆ. ನಾಳೆ ಅಥವಾ ನಾಡಿದ್ದು ಯಾವ ರೀತಿ ಇರಬೇಕು ಅಂತಾ ಸಚಿವ ಸುರೇಶಕುಮಾರ ನಿರ್ಧಾರ ಮಾಡುತ್ತಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 

___

Share this News
error: Content is protected !!