June 22, 2021

ಕನ್ನಡಿಗರಿಗೆ ಸಂದ ಜಯ; ತಪ್ಪು ಅರ್ಥ ಬಂದಿರುವುದಕ್ಕೆ ಸ್ಪಷ್ಟನೆಯೊಂದಿಗೆ ಕ್ಷಮೆಯಾಚಿಸಿದ ಗೂಗಲ್.!

ಬೆಂಗಳೂರು- ಗೂಗಲ್ ಜಾಲತಾಣದ ಹುಡುಕಾಟದಲ್ಲಿ ಕನ್ನಡ ಭಾಷೆಗೆ ಅವಮಾನ ಆಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೂಗಲ್ ಕ್ಷಮೆ ಕೋರಿದೆ. ಇದರ ಬಗ್ಗೆ ಸ್ಪಷ್ಟನೆ ನೀಡಿರುವ ಗೂಗಲ್ ಇಂಡಿಯಾ,

We apologize for the misunderstanding and hurting any sentiments.

“ಹುಡುಕುವುದು ಯಾವಾಗಲೂ ಪರಿಪೂರ್ಣವಾಗಿರುವುದಿಲ್ಲ. ಕೆಲವೊಮ್ಮೆ ಇಂಟರ್ನೆಟ್ ನಲ್ಲಿ ನಿರ್ದಿಷ್ಟವಾದ ಹುಡುಕಾಟಗಳಿಗೆ ಬರುವ ಫಲಿತಾಂಶಗಳು ಆಶ್ಚರ್ಯವನ್ನುಂಟು ಮಾಡುತ್ತವೆ. ಇದು ಸೂಕ್ತವಲ್ಲ ಎಂಬುದು ನಮಗೆ ಗೊತ್ತು, ಆದರೆ ಯಾವುದೇ ಒಂದು ಸಮಸ್ಯೆ ಎದುರಾದಾಗ ಮತ್ತು ನಮ್ಮ ಗಮನಕ್ಕೆ ಬಂದಾಗ ನಾವು ಕ್ಷಿಪ್ರವಾಗಿ ಸಮರ್ಪಕ ಕ್ರಮ ತೆಗೆದುಕೊಳ್ಳುತ್ತೇವೆ ಮತ್ತು ನಮ್ಮ ಅಲ್ಲೊರಿಧಂ ಅನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಸದಾ ಕ್ರಿಯಾಶೀಲ ವಾಗಿರುವುದನ್ನು ಮುಂದುವರಿಸಿದ್ದೇವೆ. ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾವು ಕ್ಷಮೆ ಯಾಚನೆ ಯಾಚಿಸುತ್ತಿದ್ದೇವೆ.” ಎಂದು ಗೂಗಲ್ ಹೇಳಿಕೊಂಡಿದೆ

Share this News
error: Content is protected !!