June 18, 2021

ಕೋವಿಡ್ ಟೆಸ್ಟ್ ಗೆ ಸಹಕರಿಸದ ನಾಗಲಾಪೂರ ಗ್ರಾಮ ಪೂರ್ಣ ಲಾಕ್‌ಡೌನ್.!

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಮನೆಯ ಭೇಟಿ ಹಾಗೂ ರ‍್ಯಾಪಿಡ್ ಸರ್ವೇ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಆದರೆ ನಾಗಲಾಪೂರ ಸೇರಿದಂತೆ ಕೆಲ ಗ್ರಾಮಗಳಲ್ಲಿ ಗ್ರಾಮಸ್ಥರು ತಪಾಸಣೆಗೆ ನಿರಾಕರಿಸುತ್ತಿರುವುವುದು ಕಂಡುಬರುತ್ತಿದೆ. ಇಂತಹ ಗ್ರಾಮಗಳನ್ನು ಸಂಪೂರ್ಣ ಲಾಕ್‌ಡೌನ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸಂಜಯ ಶೆಟ್ಟೆಣ್ಣವರ ಅವರು ಎಚ್ಚರಿಸಿದ್ದಾರೆ.


ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಡಿಯೋ ಸಂವಾದ ನಡೆಸಿದ ಅವರು, ಕೋವಿಡ್ ತಪಾಸಣೆಗೆ ಸಹಕರಿಸದೇ ಮನೆಗೆ ಆರೋಗ್ಯ ಸಿಬ್ಬಂದಿ ತಪಾಸಣೆಗೆ ತೆರಳಿದರೆ ಮನೆಯೊಳಗೆ ಸೇರಿಕೊಂಡು ಪ್ರತಿಭಟಿಸುತ್ತಿರುವುದು ಕಂಡುಬಂದಿದೆ.

ಬ್ಯಾಡಗಿ ತಾಲೂಕಿನ ನಾಗಲಾಪೂರ ಗ್ರಾಮದಲ್ಲಿ ಇಂತಹ ಘಟನೆ ನಡೆದಿದ್ದು, ಇಡಿ ಗ್ರಾಮವನ್ನು ಲಾಕ್‌ಡೌನ್ ಘೋಷಿಸಲಾಗಿದೆ. ಗ್ರಾಮದಿಂದ ಹೊರಗೆ ಹಾಗೂ ಗ್ರಾಮದ ಒಳಗೆ ಓಡಾಟವನ್ನು ಪೂರ್ಣ ನಿರ್ಭಂಧಿಸಲಾಗಿದೆ. ಇದೇ ಮಾದರಿಯಲ್ಲಿ ಇತರ ಗ್ರಾಮಗಳಲ್ಲಿ ಮುಂದುವರೆದರೆ ಇಡೀ ಗ್ರಾಮವನ್ನು ಲಾಕ್‌ಡೌನ್ ಮಾಡಲಾಗುವುದು ಎಂದು ಎಚ್ಚರಿಸಿದರು.

ವಿವಿಧ ಹುದ್ದೆಗಳಿಗೆ ಸರಕಾರ ಹೊರಡಿಸಿರುವ ನೇಮಕಾತಿ ಆದೇಶ ನೋಡಲು ಇಲ್ಲಿ click ಮಾಡಿ

ಗ್ರಾಮೀಣ ಪ್ರದೇಶದಲ್ಲಿ ಸರ್ವೇ, ಪರೀಕ್ಷೆ ಹಾಗೂ ಪಾಸಿಟಿವ್ ಬಂದರೆ ಕೋವಿಡ್ ಆಸ್ಪತ್ರೆಗೆ ಸೇರಿಸುವುದು ಸೇರಿದಂತೆ ಗ್ರಾಮಗಳಲ್ಲಿ ಗ್ರಾಮೀಣ ಟಾಸ್ಕ್ ಫೋರ್ಸ್ ಕೋವಿಡ್ ನಿಯಂತ್ರಣದ ಪೂರ್ಣ ಜವಾಬ್ದಾರಿ ನೀಡಲಾಗಿದೆ. ಆದರೆ ನಾಗಲಾಪೂರದಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಿರುವುದಿಲ್ಲ. ಯಾವುದೇ ಗ್ರಾಮಗಳಲ್ಲಿ ಈ ರೀತಿಯ ಬೆಳವಣಿಗೆ ನಡೆದರೆ ಆಯಾ ಗ್ರಾಮದ ಗ್ರಾಮೀಣ ಟಾಸ್ಕ್ ಫೋರ್ಸ ಕೋವಿಡ್ ಪೆಂಡ್‌ಮಿಕ್ ಕಾಯ್ದೆ ಅನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

Share this News
error: Content is protected !!